ಸುದ್ದಿಒನ್, ಚಳ್ಳಕೆರೆ, ಮಾರ್ಚ್. 16 : ಮಧ್ಯ ಕರ್ನಾಟಕದ ಪವಾಡ ಪುರುಷ, ಕಾಯಕಯೋಗಿ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವದ ಅದ್ದೂರಿಯಾಗಿ ನಡೆಯಿತು.

ರಥೋತ್ಸವಕ್ಕೂ ಮುನ್ನ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯ ವಿಶೇಷಗಳಲ್ಲಿ ಒಂದಾಗಿರುವ ಮುಕ್ತಿ ಬಾವುಟದ ಹರಾಜು ನಡೆಸಲಾಯಿತು. ಈ ಬಾರಿ ರಥದ ಮುಂದೆ ನಡೆದ ಹಟ್ಟಿ ತಿಪ್ಪೇಶನ ಮುಕ್ತಿ ಭಾವುಟ ಭರ್ಜರಿ ಮೊತ್ತಕ್ಕೆ ಹರಾಜಾಯಿತು. ಈ ವರ್ಷದ ಮುಕ್ತಿ ಭಾವುಟವನ್ನು ಬೆಂಗಳೂರು ಮೂಲದ, ನಾಯಕನಹಟ್ಟಿ ಅಳಿಯ ಉದ್ಯಮಿ ತೇಜಸ್ವಿ ಆರಾಧ್ಯ ಅವರು ರೂ.63 ಲಕ್ಷ ಗಳಿಗೆ ಹರಾಜು ಮೂಲಕ ಪಡೆದುಕೊಂಡರು.

ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಕಾರಜೋಳ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ ಬಾಬು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹಬೂಬ್ ಜಿಲಾನ್ ಸೇರಿದಂತೆ ಮತ್ತಿತರರು ಇದ್ದರು.

