ಸುದ್ದಿಒನ್, ಚಳ್ಳಕೆರೆ, ಜನವರಿ. 02 : ನಾಯಕನಹಟ್ಟಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಶ್ವೇತಾ ಹೆಚ್.ಓ. ರವಿಕುಮಾರ್, ಉಪಾಧ್ಯಕ್ಷರಾಗಿ ವಿಶ್ವನಾಥ್ ಗುರುವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

12 ನಿರ್ದೇಶಕರ ಸಂಘದ ಅಧ್ಯಕ್ಷರ ಸ್ಥಾನಕ್ಕೆ ಶ್ವೇತಾ ರವಿಕುಮಾರ್, ಗಂಗಮ್ಮ, ಪರಮೇಶ್ವರಪ್ಪ ಉಮೇದುವಾರಿಕೆ ಸಲ್ಲಿಸಿದ್ದರು. ಗಂಗಮ್ಮ ಮತ್ತು ಪರಮೇಶ್ವರಪ್ಪ ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದರಿಂದ ಶ್ವೇತಾ ರವಿಕುಮಾರ್ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿ.ವಿಶ್ವನಾಥ ಏಕಮಾತ್ರ ಉಮೇದುವಾರಿಕೆ ಸಲ್ಲಿಸಿದ್ದರಿಂದ ಅವರೂ ಸಹ ಅವಿರೋಧವಾಗಿ ಆಯ್ಕೆಯಾದರು.

ರಿಟರ್ನಿಂಗ್ ಆಫೀಸರ್ ಸಹಕಾರಿ ಅಭಿವೃದ್ದಿ ಅಧಿಕಾರಿ ಬಷೀರ್ ಖಾನ್, ಪಪಂ ಸದಸ್ಯರಾದ ಜೆ.ಆರ್.ರವಿಕುಮಾರ್, ಸಂಘದ ಕಾರ್ಯದರ್ಶಿ ಪ್ರೇಮರಾಜ್, ನಿರ್ದೇಶಕರಾದ ಡಿ.ತಿಪ್ಪೇಸ್ವಾಮಿ, ವೀರಭದ್ರಪ್ಪ, ಯೋಗೇಶ್, ಈ.ರುದ್ರಮುನಿ, ಅಭಿಷೇಕ್,ಕೆ.ಟಿ.ತಿಪ್ಪೇಸ್ವಾಮಿ, ರಾಜಣ್ಣ, ಮುರುಗಯ್ಯ ಉಪಸ್ಥಿತರಿದ್ದರು.

