ನಾಯಕನಹಟ್ಟಿ ಜಾತ್ರೆ: ನಾಳೆ ಪೂರ್ವಭಾವಿ ಸಿದ್ಧತಾ ಸಭೆ

0 Min Read

ಚಿತ್ರದುರ್ಗ, ಫೆ.23:   ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರ ಸ್ವಾಮಿಯ 2024ನೇ ಸಾಲಿನ ವಾರ್ಷಿಕ ಜಾತ್ರೆಯ ದೊಡ್ಡ ರಥೋತ್ಸವದ ಪೂರ್ವಭಾವಿ ಸಭೆಯು ಇದೇ ಫೆ.24ರಂದು ಸಂಜೆ 4ಕ್ಕೆ ನಾಯಕನಹಟ್ಟಿ ಒಳಮಠ ಸಮುದಾಯಭವನದಲ್ಲಿ ಹಮ್ಮಿಕೊಳ್ಳಲಾಗಿದೆ.  

ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks