ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ ವ್ಯಕ್ತಪಡಿಸಿದರು.
ನಗರದ ತೇರುಮಲ್ಲೇಶ್ವರ ಸ್ವಾಮಿ ದೇವಾಲಯಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿ ದರ್ಶನ ಪಡೆದ ಅವರು ಸುದ್ಧಿಗಾರರ ಜೊತೆ ಮಾತನಾಡಿದರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು ಇಬ್ಬರು ಜಂಟಿಯಾಗಿ ಪ್ರಚಾರ ಮಾಡುವುದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬರಲಿದೆ. ಹೊರಗಿನವರಿಗೆ ಟಿಕೆಟ್ ನೀಡಿರುವುದಿಂದ ತಮ್ಮ ವಿರುದ್ಧ ಜಿಲ್ಲೆಯಲ್ಲಿ ಬಂಡಾಯ ಎದ್ದಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು
ವರಿಷ್ಠರು ನನಗೆ ಟಿಕೆಟ್ ನೀಡಿದ್ದು ಒಂದೆರಡು ದಿನದಲ್ಲಿ ಎಲ್ಲಾ ಸರಿಯಾಗಲಿದೆ. ಜಿಲ್ಲೆಯಲ್ಲಿ ಯಾವುದೇ ಬಂಡಾಯ ಇಲ್ಲ. ಎರಡೂ ಪಕ್ಷಗಳ ನಾಯಕರು, ಕಾರ್ಯಕರ್ತರು ಒಗ್ಗಟ್ಟಾಗಿ ಸೇರಿ ಚುನಾವಣೆ ಎದುರಿಸಿ ಗೆಲುವು ಸಾಧಿಸಲಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಜಯಣ್ಣ, ಮಾಜಿ ಜಿಲ್ಲಾಧ್ಯಕ್ಷ ಡಿ ಯಶೋಧರ್, ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್, ಬಿಜೆಪಿ ಮುಖಂಡ ಎನ್ ಆರ್ ಲಕ್ಷ್ಮಿಕಾಂತ್ ಸೇರಿದಂತೆ ಎರಡೂ ಪಕ್ಷದ ಬಹುತೇಕ ಮುಖಂಡರು ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









