Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇಶಾದ್ಯಂತ ನಡೆದಿದ್ದ ‘NEET’ ಪರೀಕ್ಷೆ ರದ್ದು : ಮರು ಪರೀಕ್ಷೆಗೆ ಎನ್‌ಟಿಎ ನಿರ್ಧಾರ

---Advertisement---

ಸುದ್ದಿಒನ್, ನವದೆಹಲಿ,ಮೇ.12: ದೇಶಾದ್ಯಂತ ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳು ಬರೆದಿದ್ದ ನೀಟ್ (NEET) ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತವಾಗಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮೇ 3ರಂದು ಪರೀಕ್ಷೆ ನಡೆದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿದ್ದವು.ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥಿತ ಜಾಲವೊಂದು ಅಭ್ಯರ್ಥಿಗಳಿಗೆ ಮೊದಲೇ ಉತ್ತರಗಳನ್ನು ತಲುಪಿಸಿರುವ ಶಂಕೆ ವ್ಯಕ್ತವಾಗಿದೆ.
ಪ್ರಾಥಮಿಕ ತನಿಖೆ ನಡೆಸಿದ ಎನ್‌ಟಿಎ, ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿರುವುದನ್ನು ಮನಗಂಡು, ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಾರದು ಎಂಬ ದೃಷ್ಟಿಯಿಂದ ಈ ಕಠಿಣ ಕ್ರಮಕ್ಕೆ ಮುಂದಾಗಿದೆ.

ತಿಂಗಳುಗಟ್ಟಲೆ ಹಗಲಿರುಳು ಶ್ರಮವಹಿಸಿ ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಈ ಸುದ್ದಿ ದೊಡ್ಡ ಆಘಾತ ತಂದಿದೆ. ಪರೀಕ್ಷಾ ಮಂಡಳಿಯ ಈ ದಿಢೀರ್ ನಿರ್ಧಾರದಿಂದ ಪೋಷಕರು ಮತ್ತು ಅಭ್ಯರ್ಥಿಗಳಲ್ಲಿ ಆತಂಕ ಮೂಡಿದ್ದರೂ, ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಕಾಪಾಡಲು ಇದು ಅನಿವಾರ್ಯ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಮುಂದಿನ ಕ್ರಮವೇನು?

ರದ್ದಾದ ಪರೀಕ್ಷೆಯ ಬದಲಿಗೆ ಶೀಘ್ರದಲ್ಲೇ ಮರು ಪರೀಕ್ಷೆ ನಡೆಸಲು ಎನ್‌ಟಿಎ ಸಿದ್ಧತೆ ನಡೆಸುತ್ತಿದೆ.ಮರು ಪರೀಕ್ಷೆಯ ದಿನಾಂಕ ಮತ್ತು ಹೆಚ್ಚಿನ ವಿವರಗಳನ್ನು ಸದ್ಯದಲ್ಲೇ ಎನ್‌ಟಿಎ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿದೆ.ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಗಾಗಿ ಎನ್‌ಟಿಎ ವೆಬ್‌ಸೈಟ್ ಅನ್ನು ಗಮನಿಸುತ್ತಿರಲು ಸೂಚಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...