ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ, ಪ್ರಗತಿ ಸಾಧಿಸುವಲ್ಲಿ ನಿರ್ಲಕ್ಷ್ಯ ತೋರಿದ ಮೂವರು ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆ ವಿಧಿಸಿ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕರ ವಸೂಲಾತಿ ಕುರಿತಂತೆ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾ ಪಂಚಾಯತಿ ವತಿಯಿಂದ ಈ ಹಿಂದೆಯೇ ಸೂಚನೆ ನೀಡಲಾಗಿತ್ತು. ಅಲ್ಲದೆ ಹಲವು ಸಭೆಗಳನ್ನು ಕೈಗೊಂಡು, ಪತ್ರಗಳ ಮೂಲಕ ಹಾಗೂ ವಿಡಿಯೋ ಸಂವಾದ ಮೂಲಕ ತಿಳಿಸಲಾಗಿತ್ತು.

ಆದರೆ ಮೂವರು ಗ್ರಾ.ಪಂ. ಪಿಡಿಒ ಗಳು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿರಲಿಲ್ಲ.
ಚಳ್ಳಕೆರೆ ತಾಲ್ಲೂಕು ದೇವರೆಡ್ಡಿಹಳ್ಳಿ ಗ್ರಾ.ಪಂ. ಪಿಡಿಒ ವೇದವ್ಯಾಸಲು ಅವರು ಕರ ವಸೂಲಾತಿಯಲ್ಲಿ ಶೇ. 27.88 ರಷ್ಟು, ಹಿರೇಹಳ್ಳಿ ಗ್ರಾ.ಪಂ. ಪಿಡಿಒ ನರಸಿಂಹಪ್ಪ- ಶೇ. 37.77 ಹಾಗೂ ಹೊಸದುರ್ಗ ತಾಲ್ಲೂಕು ಗುಡ್ಡದ ನೇರಲೆಕೆರೆ ಗ್ರಾ.ಪಂ. ಪಿಡಿಒ ಕುಮಾರ್ ಸಿಂಗ್ ಬಿ.ಎಲ್. ಅವರು ಕೇವಲ ಶೇ. 36.68 ರಷ್ಟು ಮಾತ್ರ ತೆರಿಗೆ ವಸೂಲಾತಿ ಮಾಡಿದ್ದು, ಕತವ್ಯದಲ್ಲಿ ನಿರ್ಲಕ್ಷ್ಯ ತೋರಿ, ಜಿಲ್ಲೆಯ ಪ್ರಗತಿ ಕುಂಠಿತಗೊಳ್ಳಲು ಕಾರಣರಾಗಿದ್ದನ್ನು ಪರಿಗಣಿಸಿ, ಕಾರಣ ಕೇಳಿ ಪಿಡಿಒ ಗಳಿಗೆ ನೋಟಿಸ್ ನೀಡಲಾಗಿತ್ತು, ಈ ನೋಟಿಸ್‍ಗೆ ಸೂಕ್ತ ಸಮಜಾಯಿಷಿ ಸಲ್ಲಿಸಿರುವುದಿಲ್ಲ. ಹೀಗಾಗಿ ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ವಹಿಸಿ, ಪ್ರಗತಿಗೆ ಕುಂಠಿತರಾಗಲು ಕಾರಣರಾದ ಈ ಮೂವರು ಪಿಡಿಒ ಗಳಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆ ವಿಧಿಸಿ ಆದೇಶಿಸಲಾಗಿದೆ ಎಂದು ಜಿ.ಪಂ. ಸಿಇಒ ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್