Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

---Advertisement---

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ, ಪ್ರಗತಿ ಸಾಧಿಸುವಲ್ಲಿ ನಿರ್ಲಕ್ಷ್ಯ ತೋರಿದ ಮೂವರು ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆ ವಿಧಿಸಿ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

 

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕರ ವಸೂಲಾತಿ ಕುರಿತಂತೆ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾ ಪಂಚಾಯತಿ ವತಿಯಿಂದ ಈ ಹಿಂದೆಯೇ ಸೂಚನೆ ನೀಡಲಾಗಿತ್ತು.  ಅಲ್ಲದೆ ಹಲವು ಸಭೆಗಳನ್ನು ಕೈಗೊಂಡು, ಪತ್ರಗಳ ಮೂಲಕ ಹಾಗೂ ವಿಡಿಯೋ ಸಂವಾದ ಮೂಲಕ ತಿಳಿಸಲಾಗಿತ್ತು.

ಆದರೆ ಮೂವರು ಗ್ರಾ.ಪಂ. ಪಿಡಿಒ ಗಳು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿರಲಿಲ್ಲ.

ಚಳ್ಳಕೆರೆ ತಾಲ್ಲೂಕು ದೇವರೆಡ್ಡಿಹಳ್ಳಿ ಗ್ರಾ.ಪಂ. ಪಿಡಿಒ ವೇದವ್ಯಾಸಲು ಅವರು ಕರ ವಸೂಲಾತಿಯಲ್ಲಿ ಶೇ. 27.88 ರಷ್ಟು, ಹಿರೇಹಳ್ಳಿ ಗ್ರಾ.ಪಂ. ಪಿಡಿಒ ನರಸಿಂಹಪ್ಪ- ಶೇ. 37.77 ಹಾಗೂ  ಹೊಸದುರ್ಗ ತಾಲ್ಲೂಕು ಗುಡ್ಡದ ನೇರಲೆಕೆರೆ ಗ್ರಾ.ಪಂ. ಪಿಡಿಒ ಕುಮಾರ್ ಸಿಂಗ್ ಬಿ.ಎಲ್. ಅವರು ಕೇವಲ ಶೇ. 36.68 ರಷ್ಟು ಮಾತ್ರ ತೆರಿಗೆ ವಸೂಲಾತಿ ಮಾಡಿದ್ದು,  ಕತವ್ಯದಲ್ಲಿ ನಿರ್ಲಕ್ಷ್ಯ ತೋರಿ, ಜಿಲ್ಲೆಯ ಪ್ರಗತಿ ಕುಂಠಿತಗೊಳ್ಳಲು ಕಾರಣರಾಗಿದ್ದನ್ನು ಪರಿಗಣಿಸಿ, ಕಾರಣ ಕೇಳಿ ಪಿಡಿಒ ಗಳಿಗೆ ನೋಟಿಸ್ ನೀಡಲಾಗಿತ್ತು, ಈ  ನೋಟಿಸ್‍ಗೆ ಸೂಕ್ತ ಸಮಜಾಯಿಷಿ ಸಲ್ಲಿಸಿರುವುದಿಲ್ಲ.  ಹೀಗಾಗಿ ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ವಹಿಸಿ, ಪ್ರಗತಿಗೆ ಕುಂಠಿತರಾಗಲು ಕಾರಣರಾದ ಈ ಮೂವರು ಪಿಡಿಒ ಗಳಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆ ವಿಧಿಸಿ ಆದೇಶಿಸಲಾಗಿದೆ ಎಂದು ಜಿ.ಪಂ. ಸಿಇಒ ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment