Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೆಹರೂ ಅಗಲಿ 62 ವರ್ಷ.. ಆದ್ರೂ ಅವರ ಆದರ್ಶಗಳೇ ನಮಗೆ ದಾರಿದೀಪ: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಮಾತು

---Advertisement---

ಸುದ್ದಿಒನ್,ಬೆಂಗಳೂರು,ಮೇ.27: ಜವಹಾರ್ ಲಾಲ್ ನೆಹರೂ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ಮೊದಲ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ಜನರ ಸೇವೆ ಮಾಡಿದ್ದಾರೆ. ಸಮಾಜವಾದಿ ಮತ್ತು ಮಿಶ್ರ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿ, ಬೃಹತ್ ಅಣೆಕಟ್ಟುಗಳ ನಿರ್ಮಾಣ, ಶಿಕ್ಷಣ, ಸಹಕಾರ ಕ್ಷೇತ್ರಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ನೆಹರೂ ಕಾರಣಕರ್ತರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದಿವಂಗತ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆಯ ಅಂಗವಾಗಿ ಇಂದು ವಿಧಾನಸೌಧ ಆವರಣದಲ್ಲಿರುವ ನೆಹರೂರವರ ಪುತ್ಥಳಿ ಬಳಿ‌ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಯನ್ನು ವೈಜ್ಞಾನಿಕವಾಗಿ ಸಾಧಿಸುವ ಪ್ರಯತ್ನ ಮಾಡಿದ್ದರು. ಅವರು ಅಗಲಿ 62 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ನೆಹರೂರವರನ್ನು ಸ್ಮರಿಸಿ, ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ. ಅವರ ಆದರ್ಶಗಳು ಸದಾ ಮೇಲ್ಪಂಕ್ತಿಯಲ್ಲಿವೆ ಎಂದು ಹೇಳಿದ್ದಾರೆ.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ|| ಶಾಲಿನಿ‌ ರಜನೀಶ್ ಸೇರಿದಂತೆ ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now