2ನೇ ವಿಮಾನ ನಿಲ್ದಾಣಕ್ಕೆ ಅವಕಾಶ ಕೊಡದಂತೆ ನೆಲಮಂಗಲ ರೈತರಿಂದ ಕುಮಾರಸ್ವಾಮಿಗೆ ಮನವಿ..!

ಬೆಂ.ಗಾ: ಬೆಂಗಳೂರಿನ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಎಲ್ಲಿ ನಿರ್ಮಾಣ ಮಾಡಬೇಕು ಎಂಬುದೇ ದಿಡ್ಡ ಚರ್ಚಾ ವಿಷಯವಾಗಿದೆ. ತುಮಕೂರು ಅಥವಾ ನೆಲಮಂಗಲದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಈ ಸಂಬಂಧ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ರೈತರು ಮನವಿ ಮಾಡಿದ್ದಾರೆ.

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡದಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಾಜಿ ಶಾಸಕ ಡಾ.ಕೆ.ಶ್ರೀನಿವಾಸ ಮೂರ್ತಿ ನೇತೃತ್ವದಲ್ಲಿ ಮನವಿ ಮಾಡಲಾಗಿದೆ. ಕಳೆದ ಎರಡು ತಿಂಗಳಿನಿಂದ ತಾಲೂಕಿನ ರೈತರಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಆತಂಕ ಮನೆ ಮಾಡಿದೆ. ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ವಿಮಾನ ನಿಲ್ದಾಣವನ್ನು ನಿರ್ಮಿಸದಂತೆ ಹೋರಾಟಗಳು ನಡೆಯುತ್ತಿವೆ. ಆದ್ದರಿಂದ ಈ ಭಾಗದಲ್ಲಿ ಯಾವುದೇ ಕಾರಣಕ್ಕೂ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅವಕಾಶವನ್ನು ನೀಡದಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮನವಿ ನೀಡಿದ್ದೇವೆ. ಆದಷ್ಟು ಬೇಗ ಕೇಂದ್ರದ ಗಮನಕ್ಕೆ ತಂದು ರೈತರ ಪರವಾಗಿ ನಿಲ್ಲುವುದಾಗಿ ಅವರು ಭರವಸೆಯನ್ನು ನೀಡಿದ್ದಾರೆ ಎಂದಿದ್ದಾರೆ.

ಅಭಿವೃದ್ಧಿ ಹೆಸರಲ್ಲಿ ರೈತರ ಬೆನ್ನಯ ಮುರಿಯುವುದು ಸರಿಯಲ್ಲ. ಕೃಷಿ ಭೂಮಿಯನ್ನು ಅಭಿವೃದ್ಧಿ ಪಡಿಸುವ ಯೋಜನೆಗಳನ್ನು ಜಾರಿಗೆ ತರಬೇಕು‌. ದಿನೇ ದಿನೇ ರೈತರ ಸಂಖ್ಯೆ ಇಳಿಮುಖವಾಗುತ್ತಿದೆ. ಇದು ಹೀಗೆ ಮುಂದುವರೆದರೆ ತಿನ್ನುವ ಅನ್ನಕ್ಕೂ ಪರದಾಡಬೇಕಾಗಲಿದೆ. ರೈತರ ಭೂಮಿಯನ್ನು ಬಿಟ್ಟು ಬರಡು ಭೂಮಿಗಳಲ್ಲಿ ಕೈಗಾರಿಕೆ ಹಾಗೂ ವಿಮಾನ ನಿಲ್ದಾಣ ನಿರ್ಮಾಣ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!