ಸುದ್ದಿಒನ್ | ನೇಪಾಳದಲ್ಲಿ ಭೀಕರ ಅಪಘಾತ ಸಂಭವಿಸಿದೆ. 40 ಭಾರತೀಯರನ್ನು ಹೊತ್ತೊಯ್ಯುತ್ತಿದ್ದ ಬಸ್ ನದಿಗೆ ಬಿದ್ದಿದೆ. ಸ್ಥಳೀಯರ ಮಾಹಿತಿಯಂತೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.
ಈವರೆಗೆ ಬಂದಿರುವ ಮಾಹಿತಿ ಪ್ರಕಾರ ಹಲವರು ಸಾವನ್ನಪ್ಪಿರುವ ಸಾಧ್ಯತೆ ಇದೆ. ನೇಪಾಳ ಪೊಲೀಸ್ ಅಧಿಕಾರಿಗಳ ಪ್ರಕಾರ, 40 ಮಂದಿ ಭಾರತೀಯ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿ ನದಿಗೆ ಬಿದ್ದಿದೆ. ಬಸ್ ಪೋಖರಾದಿಂದ ಕಠ್ಮಂಡುವಿಗೆ ಹೋಗುತ್ತಿದೆ.
ಜಿಲ್ಲಾ ಪೊಲೀಸ್ ಕಛೇರಿ ತನಹುನ್ ಡಿಎಸ್‌ಪಿ ದೀಪ್‌ಕುಮಾರ್ ರಾಯಾ ಇದನ್ನು ಖಚಿತಪಡಿಸಿದ್ದಾರೆ. ಯುಪಿ ಎಫ್‌ಟಿ 7623 ನಂಬರ್ ಪ್ಲೇಟ್ ಹೊಂದಿರುವ ಬಸ್ ನದಿಗೆ ಬಿದ್ದಿದೆ ಎಂದು ಅವರು ಹೇಳಿದರು. ಈ ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ. ಪೊಖರಾದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ವೇಳೆ ಬಸ್ ನದಿಗೆ ಬಿದ್ದಿದೆ. ಮಳೆಯಿಂದಾಗಿ ಪರಿಹಾರ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶ ರಾಜ್ಯಕ್ಕೆ ಸೇರಿದ ಟ್ರಾವೆಲ್ ಬಸ್ ಶುಕ್ರವಾರ (ಆ.23) ಬೆಳಗ್ಗೆ ನೇಪಾಳದ ಪೊಖರಾದಿಂದ ಕಠ್ಮಂಡುವಿಗೆ ಹೊರಟಿತ್ತು. ಬೆಟ್ಟದಲ್ಲಿ ಬಸ್ ನಿಯಂತ್ರಣ ತಪ್ಪಿ ಮರ್ಸಾಂಗಡಿ ನದಿಗೆ ಬಿದ್ದಿದೆ. ಮಾಹಿತಿ ಪಡೆದ ಅಧಿಕಾರಿಗಳು ಕೂಡಲೇ ಘಟನಾ ಸ್ಥಳಕ್ಕೆ ಸೇನೆ ಮತ್ತು ರಕ್ಷಣಾ ತಂಡಗಳೊಂದಿಗೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಈವರೆಗೆ 16 ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, 14 ಮಂದಿಯ ಮೃತದೇಹಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಪತ್ತೆಯಾದವರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರೀ ಮಳೆಯಿಂದಾಗಿ ನದಿಯು ವೇಗವಾಗಿ ಹರಿಯುತ್ತಿರುವುದರಿಂದ ಅನೇಕ ಜನರು ನಾಪತ್ತೆಯಾಗಿದ್ದಾರೆ ಮತ್ತು ಕೆಲವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್‌ನಲ್ಲಿ 40 ಜನರಿದ್ದು, ಕೆಲವರನ್ನು ರಕ್ಷಿಸಲಾಗಿದೆ. ಆದರೆ ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದಾರೆ. ತನಹುನ್ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ.
ಬಸ್ ಉತ್ತರ ಪ್ರದೇಶಕ್ಕೆ ಸೇರಿದ್ದು. ಆದರೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರು ಉತ್ತರ ಪ್ರದೇಶದ ಯಾವ ಜಿಲ್ಲೆಯಿಂದ ನೇಪಾಳಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಏತನ್ಮಧ್ಯೆ, ನೇಪಾಳದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಜನರು ಎಲ್ಲಿಂದ ಬಂದಿದ್ದಾರೆ ಎಂಬುದನ್ನು ತಿಳಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಉತ್ತರ ಪ್ರದೇಶ ಪರಿಹಾರ ಆಯುಕ್ತರು ತಿಳಿಸಿದ್ದಾರೆ.