Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾವೇರಿ ವಿಭಾಗದಲ್ಲಿ ಹೊಸ ಬಸ್ ಸೇವೆ ಆರಂಭ: ಬೆಂಗಳೂರು–ಪಣಜಿ ಮಾರ್ಗಗಳಿಗೆ ಬಲ

---Advertisement---

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹಾವೇರಿ ವಿಭಾಗವು ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಮುಖ ಮಾರ್ಗಗಳಲ್ಲಿ ಹೊಸ ಬಸ್‌ಗಳ ಸಂಚಾರವನ್ನು ಆರಂಭಿಸಿದೆ. ಹಾವೇರಿ–ಬೆಂಗಳೂರು, ಹುಬ್ಬಳ್ಳಿ–ಹಾವೇರಿ–ಬೆಂಗಳೂರು ಹಾಗೂ ದಾವಣಗೆರೆ–ಹಾವೇರಿ–ಪಣಜಿ ಮಾರ್ಗಗಳಲ್ಲಿ ಈ ಸೇವೆ ಆರಂಭಗೊಂಡಿದೆ.

ಈ ನೂತನ ಬಸ್ ಸೇವೆಗೆ ಉಪ ಸಭಾಪತಿ ಹಾಗೂ ಶಾಸಕ ರುದ್ರಪ್ಪ ಲಮಾಣಿ ಅವರು ಸೋಮವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಲಪಡಿಸುವಲ್ಲಿ ಈ ಕ್ರಮ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಎಂ.ಎಂ. ಹಿರೇಮಠ, ತಾಲೂಕು ಅಧ್ಯಕ್ಷ ಎಂ.ಎಂ. ಮೈದೂರು, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಹಾವೆಮುಲ್ ನಿರ್ದೇಶಕ ಬಸವೇಶಗೌಡ ಪಾಟೀಲ ಸೇರಿದಂತೆ ಹಲವರು ಭಾಗವಹಿಸಿದರು. ಜೊತೆಗೆ ಹಾವೇರಿ ವಿಭಾಗದ ವಿಭಾಗೀಯ ಸಾರಿಗೆ ಅಧಿಕಾರಿ ಅಶೋಕ ಪಾಟೀಲ್, ಘಟಕ ವ್ಯವಸ್ಥಾಪಕ ಪ್ರಶಾಂತ ಸಂಗ್ರೇಶಿ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಹೊಸ ಬಸ್‌ಗಳ ಸಂಚಾರದಿಂದ ಪ್ರಯಾಣಿಕರಿಗೆ ಉತ್ತಮ ಸಂಪರ್ಕ ಸೌಲಭ್ಯ ದೊರೆಯಲಿದ್ದು, ವಿಶೇಷವಾಗಿ ಬೆಂಗಳೂರು ಹಾಗೂ ಪಣಜಿ ಮಾರ್ಗಗಳಲ್ಲಿ ಪ್ರಯಾಣ ಸುಲಭವಾಗಲಿದೆ. ಈ ಕ್ರಮದಿಂದ ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚುವ ನಿರೀಕ್ಷೆಯಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now