ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿ ಹಾಗೂ ಸಂಪುಟ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಲ್ಲಿಕಾರ್ಜುನ ಖರ್ಗೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ತನ್ನ ಎಲ್ಲಾ ಮಿತ್ರ ಪಕ್ಷಗಳಿಗೆ ಆಹ್ವಾನ ಕಳುಹಿಸಿದೆ.
ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆ ಒಂದೆರೆಡು ದಿನದಲ್ಲಿ ರೂಪುಗೊಳ್ಳಲಿವೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಯಾರಾಗಬಹುದು ಎಂದು ಚರ್ಚಿಸಲು ಕಾಂಗ್ರೆಸ್ ಇಂದು ತನ್ನ ಶಾಸಕರ ಸಭೆ ಕರೆದಿದೆ. ಈ ಸಭೆಗೆ ದೆಹಲಿಯಿಂದ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸುಶೀಲ್ ಕುಮಾರ್ ಶಿಂಧೆ, ದೀಪಕ್ ಬಬಾರಿಯಾ ಮತ್ತು ಜಿತೇಂದ್ರ ಸಿಂಗ್ ಅಲ್ವಾರ್ ಕರ್ನಾಟಕ ಸಿಎಲ್‌ಪಿ ಸಭೆಯ ವೀಕ್ಷಕರಾಗಿದ್ದಾರೆ.
ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂದು ಇಂದೇ ಘೋಷಣೆಯಾಗುವ ಸಾಧ್ಯತೆ ಕಡಿಮೆ. ಈ ನಿಟ್ಟಿನಲ್ಲಿ ಹೈಕಮಾಂಡ್ ಸೂಕ್ತ ನಿರ್ಧಾರವನ್ನು ನಾಳೆ ಅಥವಾ ನಾಡಿದ್ದು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.





GIPHY App Key not set. Please check settings