ನವದೆಹಲಿ: ದೇಶದಾದ್ಯಂತ ಹೆಚ್ಚಿನ ಸಂಖ್ಯೆಯ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಕಳೆದ 24 ಗಂಟೆಗಳಲ್ಲಿ 2,68,833 ಹೊಸ ಕೊರೊನಾ ಪಾಸಿಟಿದವ್ ಪ್ರಕರಣಗಳು ವರದಿಯಾಗಿವೆ ಎಂದು ಶನಿವಾರದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಇಂದಿನ ಹೆಲ್ತ್ ಬುಲೆಟಿನ್ ತಿಳಿಸಿದೆ.
ದೇಶದಲ್ಲಿ ಪಾಸಿಟಿವಿಟಿ ಪ್ರಮಾಣವು ಶೇಕಡಾ 16.66 ತಲುಪಿದೆ.
ದೇಶದಲ್ಲಿ ಪ್ರಸ್ತುತ 14,17,820 ಸಕ್ರಿಯ ಪ್ರಕರಣಗಳಿವೆ. ಅಂತೆಯೇ, ಕಳೆದ 24 ಗಂಟೆಗಳಲ್ಲಿ 1,22,684 ಜನರು ಕೋವಿಡ್ನಿಂದ ಚೇತರಿಸಿಕೊಂಡಿದ್ದಾರೆ ಮತ್ತು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಮತ್ತೊಂದೆಡೆಕೊರೊನಾ ವೈರಸ್ನ ಹೊಸ ರೂಪಾಂತರವಾದ ಒಮಿಕ್ರಾನ್ನ ಪ್ರಕರಣಗಳ ಸಂಖ್ಯೆ ದೇಶದಲ್ಲಿ 6,041 ಕ್ಕೆ ತಲುಪಿದೆ.