Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಂಚಿಗನಾಳ್‍ನಲ್ಲಿ ಹೊಸ ಜಿಲ್ಲಾಧಿಕಾರಿ ಕಚೇರಿ : ಎಎಪಿ ಜಗದೀಶ್ ಹೇಳಿಕೆಗೆ ಎನ್.ಡಿ.ಕುಮಾರ್ ತೀವ್ರ ವಿರೋಧ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ. 27 : ಕುಂಚಿಗನಾಳ್‍ನಲ್ಲಿ ಹೊಸ ಜಿಲ್ಲಾಧಿಕಾರಿಗಳ ಕಛೇರಿಯನ್ನು ವೈದ್ಯಕೀಯ ಕಾಲೇಜನ್ನಾಗಿ ಪರಿವರ್ತನೆ ಮಾಡಿರುವ ಬಗ್ಗೆ ಆಕ್ಷೇಪಣೆಯನ್ನು ವ್ಯಕ್ತಪಡಿಸಿರುವ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಜಗದೀಶ್ ರವರ ಮಾತಿಗೆ ಕಾಂಗ್ರೆಸ್ ಪಕ್ಷದ ಓಬಿಸಿ ಘಟಕದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್ ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಎನ್,ಡಿ.ಕುಮಾರ್, ಹಿಂದಿನ ಬಿಜೆಪಿ ಸರ್ಕಾರ ಊರಿನಿಂದ ಹೊರಗಡೆಯಲ್ಲಿ ನೂತನವಾಗಿ ಕಟ್ಟಡವನ್ನು ನಿರ್ಮಾಣ ಮಾಡುವುದರ ಮೂಲಕ ನಗರದ ಮಧ್ಯದಲ್ಲಿ ಇರುವ ಜಿಲ್ಲಾಧಿಕಾರಿಗಳ ಕಚೇರಿಯನ್ನು ಉರಿನಿಂದ ಹೊರಗಡೆಗೆ ಹಾಕಲು ತೀರ್ಮಾನ ಮಾಡಲಾಗಿ ಅಲ್ಲಿ ಕಟ್ಟಡವನ್ನು ಕಟ್ಟಲು ತಯಾರಿ ಮಾಡಿ ಈಗ ಪೂರ್ಣ ಪ್ರಮಾಣದಲ್ಲಿ ಕಟ್ಟಡ ನಿರ್ಮಾಣವಾಗಿದೆ ಆದರೆ ಇತ್ತಿಚೆಗೆ ಚಿತ್ರದುರ್ಗಕ್ಕೆ ಬೇಟಿ ನೀಡಿದ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಸತೀಶ್ ಜಾರಕಿಹೊಳಿ ರವರು ಸ್ಥಳಕ್ಕೆ ಭೇಟಿ ನೀಡಿ ಅಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡವನ್ನು ನಿರ್ಮಾಣ ಮಾಡಿರುವ ಬಗ್ಗೆ ತಮ್ಮ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು, ಇದರ ಬಗ್ಗೆ ಮುಖ್ಯಮಂತ್ರಿಗಳು ಸಹಾ ಅಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ಪ್ರಾರಂಭ ಮಾಡುವುದು ಬೇಡ ಬೇರೆದ್ದಕ್ಕೆ ಉಪಯೋಗವನ್ನು ಮಾಡುವಂತೆ ಸೂಚಿಸಿದ್ದರು ಎಂದರು.

ಇದರಂತೆ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಗಳ ಕಟ್ಟಡವನ್ನು ಮೆಡಿಕಲ್ ಕಾಲೇಜಿಗೆ ನೀಡಲು ಜಿಲ್ಲೆಯ ಸಚಿವರು, ಶಾಸಕರು, ಅಧಿಕಾರಿಗಳು ಸಮ್ಮತಿಸಿದ್ದಾರೆ. ಇದರ ಮಧ್ಯೆ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಜಗದೀಶ್ ರವರ ಅಲ್ಲಿ ಮೆಡಿಕಲ್ ಕಾಲೇಜು ಮಾಡುವುದು ಬೇಡ ಜಿಲ್ಲಾಧಿಕಾರಿಗಳ ಕಚೇರಿಯನ್ನು ಪ್ರಾರಂಭ ಮಾಡಿ ಎಂದು ಸರ್ಕಾರವನ್ನು ಒತ್ತಾಯಿಸಿರುವುದು ಸರಿಯಾದ ಕ್ರಮವಲ್ಲ, ಅಲ್ಲಿ ಮೆಡಿಕಲ್ ಕಾಲೇಜನ್ನು ಮಾಡುವುದರಿಂದ ಊರು ಅಭೀವೃದ್ದಿ ಹೊಂದುತ್ತದೆ. ಇದ್ದಲ್ಲದೆ ಹಲವಾರು ಜನರಿಗೆ ಉದ್ಯೋಗ ದೂರಕುತ್ತದೆ, ಸಾರಿಗೆ ವ್ಯವಸ್ಥೆ ಬೆಳೆಯುತ್ತದೆ, ಇದರಿಂದ ಹಲವಾರು ಜನರಿಗೆ ಕೆಲಸ ದೊರಕುತ್ತದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರ ಮಾಡಿದ ಕೆಟ್ಟ ನಿರ್ಧಾರದಿಂದ ಜನತೆಗೆ ತೊಂದರೆಯಾಗುತ್ತದೆ ಇದನ್ನು ಮನಗಂಡ ನಮ್ಮ ಭಾಗದ ಚುನಾಯಿತ ಪ್ರತಿನಿಧಿಗಳು ಅದನ್ನು ಜಿಲ್ಲಾಧಿಕಾರಿಗಳ ಕಚೇರಿಯ ಬದಲು ಮೆಡಿಕಲ್ ಕಾಲೇಜನ್ನು ಮಾಡುವುದರ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ, ಅಲ್ಲದೆ ಅವರ ವಿದ್ಯಾಭ್ಯಾಸಕ್ಕೂ ಸಹಾ ಅನುಕೂಲವಾಗಲಿದೆ ಎಂದು ಎನ್.ಡಿ. ಕುಮಾರ್ ತಿಳಿಸಿದ್ದು ಅಲ್ಲಿ ಯಾವುದೇ ಕಾರಣಕ್ಕೂ ಸಹಾ ಜಿಲ್ಲಾಧಿಕಾರಿಗಳ ಕಚೇರಿಯನ್ನು ಮಾಡದೇ ಮೆಡಿಕಲ್ ಕಾಲೇಜನ್ನು ಪ್ರಾರಂಭ ಮಾಡುವುದು ಸೂಕ್ತ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now