ಸುದ್ದಿಒನ್,ಬೆಂಗಳೂರು,ಜೂನ್.04: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ. ಹರಿಪ್ರಸಾದ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ನಗರದ ‘ಕಾವೇರಿ’ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಹರಿಪ್ರಸಾದ್, ತಮಗೆ ಲಭಿಸಿರುವ ಹೊಸ ಜವಾಬ್ದಾರಿಯ ಹಿನ್ನೆಲೆಯಲ್ಲಿ ಧನ್ಯವಾದ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಬಿ.ಕೆ. ಹರಿಪ್ರಸಾದ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಅಭಿನಂದಿಸಿದ ಸಿದ್ದರಾಮಯ್ಯ, ನೂತನ ಜವಾಬ್ದಾರಿಯಲ್ಲಿ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು.ಬಿ.ಕೆ. ಹರಿಪ್ರಸಾದ್ ಅವರ ನೇಮಕಕ್ಕೆ ತೀವ್ರ ಸಂತಸ ವ್ಯಕ್ತಪಡಿಸಿದರು.ಆತ್ಮೀಯರಾದ ಬಿ.ಕೆ. ಹರಿಪ್ರಸಾದ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಅವರ ಸೈದ್ಧಾಂತಿಕ ಬದ್ಧತೆ, ದೀರ್ಘಕಾಲದ ರಾಜಕೀಯ ಅನುಭವ, ಪಕ್ಷ ನಿಷ್ಠೆ ಮತ್ತು ಹೋರಾಟದ ಬದುಕು ರಾಜ್ಯ ಕಾಂಗ್ರೆಸ್ ಪಕ್ಷವನ್ನು ಹೊಸ ದಿಕ್ಕಿನಲ್ಲಿ ಮುನ್ನಡೆಸಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಮತ್ತು ಪ್ರಜಾಪ್ರಭುತ್ವ ವಿರೋಧಿಗಳ ವಿರುದ್ಧ ರಾಜ್ಯದ ಜನರನ್ನು ಜಾಗೃತಗೊಳಿಸುವ ಅವರ ಪ್ರಯತ್ನಗಳಿಗೆ ಸಂಪೂರ್ಣ ಯಶಸ್ಸು ಸಿಗಲಿ ಎಂದು ಹಾರೈಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















