ಬೆಂಗಳೂರು : ನಟಿ ಅಮೂಲ್ಯ ಬಾಲ ನಟಿಯಾಗಿ ಚಿತ್ರರಂಗ ಪ್ರವೇಶಿಸಿ, ಆ ಬಳಿಕ ನಟಿಯಾಗಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ರು. 2017 ರಲ್ಲಿ ರಾಜಕೀಯ ಕುಟುಂಬದ ಜಗದೀಶ್ ಅವರನ್ನ ಕೈಹಿಡಿದ ಮೇಲೆ ಸಿನಿಮಾ ರಂಗದಿಂದ ದೂರವೇ ಉಳಿದು ಬಿಟ್ಟರು. ಆದ್ರೂ ಅವರ ಅಭಿಮಾನಿಗಳಿಗೆ ಅವರ ಮೇಲಿರುವ ಕ್ರೇಜ್ ಸ್ವಲ್ಪವೂ ಕಡಿಮೆಯಾಗಿಲ್ಲ. ಇದೀಗ ಅವರ ಹೊಸ ಫೋಟೋ ನೋಡಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.
ಹೌದು, ಅಮೂಲ್ಯ ಜಗದೀಶ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅದನ್ನ ಸ್ವತಃ ಅಮೂಲ್ಯ ಅವರೇ ಹೇಳಿಕೊಂಡಿದ್ದಾರೆ. ಜಗದೀಶ್ ಮತ್ತು ಅಮೂಲ್ಯ ಕುಳಿತಿರುವ ಫೋಟೋವದು. ಸ್ನಾಕ್ಸ್ ತಿನ್ನುತ್ತಾ, ಹರಟೆ ಹೊಡೆಯುತ್ತಿದ್ದಾರೆ. ಆ ಫೋಟೋ ಹಾಕಿ ಕ್ಯಾಪ್ಶನ್ ಕೊಟ್ಟಿದ್ದಾರೆ ಅಮೂಲ್ಯ.
ನಾವೀಗ ಇಬ್ಬರಲ್ಲ.. 2022ಕ್ಕೆ ಮೂವರಾಗುತ್ತಿದ್ದೇವೆ ಎಂದು ಬರೆದಿದ್ದಾರೆ. ಆ ಫೋಟೋದಲ್ಲಿ ಅದೇ ಸೂಚನೆಯನ್ನ ನೀಡಿದ್ದಾರೆ. ಮತ್ತೆ ಸಿನಿಮಾ ರಂಗಕ್ಕೆ ಅಮೂಲ್ಯ ಬರ್ತಾರಾ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿತ್ತು. ಆದ್ರೆ ರಾಜಕೀಯದಲ್ಲೇ ಸ್ವಲ್ಪ ಸ್ವಲ್ಪ ತೊಡಗಿಸಿಕೊಂಡ ಅಮೂಲ್ಯ, ಸಮಾಜ ಸೇವೆಯನ್ನು ಮಾಡುತ್ತಾ ಬಂದಿದ್ದರು. ಇದೀಗ ಮೊದಲ ಮಗುವಿಗೆ ಜನ್ಮ ನೀಡುತ್ತಿದ್ದಾರೆ. ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆಯೇ ಸುರಿದಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…