Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಎಷ್ಟಿದೆ ಇಂದಿನ ಚಿನ್ನ – ಬೆಳ್ಳಿ ಬೆಲೆ

---Advertisement---

ದಿನದಿಂದ ದಿನಕ್ಕೆ ಯುದ್ಧದ ತೀವ್ರತೆ ಹೆಚ್ಚಾಗುತ್ತಿದ್ದು ಇದರಿಂದ ಚಿನ್ನ – ಬೆಳ್ಳಿ ಬೆಲೆಯು ದುಬಾರಿಯಾಗುತ್ತಿದೆ. ಮಾರ್ಚ್ 11ರಂದು ಸಹ ಚಿನ್ನದ ಬೆಲೆಯು ಭಾರೀ ಹೆಚ್ಚಳವಾಗಿದೆ. ಚಿನ್ನದ ಬೆಲೆ ಹೆಚ್ಚಳವಾದರೂ ಬೆಳ್ಳಿಯ ಬೆಲೆಯಲ್ಲಿ ದೊಡ್ಡ ವ್ಯತ್ಯಾಸ ಕಂಡು ಬಂದಿಲ್ಲ. ಬೆಳ್ಳಿ ಬೆಲೆಯು ಬುಧವಾರ ಯಥಾಸ್ಥಿತಿ ಮುಂದುವರಿದಿದೆ.

18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 12,248 ರೂಪಾಯಿ ಆಗಿದೆ. 10 ಗ್ರಾಂಗೆ 1,22,480 ರೂ. ಆಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,970 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,49,700 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಹೆಚ್ಚಳವಾಗಿದೆ. ಮಾರ್ಚ್ 11ರಂದು 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 16,331 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,63,310 ರೂ. ಆಗಿದೆ.

ಬೆಳ್ಳಿ ಬೆಲೆಯು 1 ಗ್ರಾಂಗೆ 290 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2,90,000 ರೂ. ಆಗಿದೆ. ಮಾರ್ಚ್ ಆರಂಭದಲ್ಲಿ ಏರಿಕೆಯಾದ ಶುದ್ಧ ಚಿನ್ನದ ಬೆಲೆ 17 ಸಾವಿರ ದಾಟಿತ್ತು. ಆದರೆ ನಂತರ ಕಳೆದ ಸೋಮವಾರದಿಂದ ಚಿನ್ನದ ಬೆಲೆ ಕುಸಿತದ ಹಾದಿಯಲ್ಲಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...