Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹೊಸ ನಿಯಮ? ಸರ್ಕಾರದಿಂದ ಮರು ಅರ್ಜಿ ಸ್ವೀಕಾರಕ್ಕೆ ಸಿದ್ಧತೆ

---Advertisement---

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆ ಇದೀಗ ದೊಡ್ಡ ವಿವಾದದ ಕೇಂದ್ರಬಿಂದುವಾಗಿದೆ. ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಗಂಭೀರ ತಾಂತ್ರಿಕ ದೋಷಗಳು ಕಂಡುಬಂದಿದ್ದು, ಈಗಾಗಲೇ ಮೃತಪಟ್ಟಿದ್ದ ಸಾವಿರಾರು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಸರ್ಕಾರದಿಂದ ಹಣ ವರ್ಗಾವಣೆಯಾಗಿರುವುದು ಪರಿಶೀಲನೆಯಲ್ಲಿ ಬಹಿರಂಗವಾಗಿದೆ.

ಕಳೆದ ಐದು ತಿಂಗಳ ಅವಧಿಯಲ್ಲಿ ಸುಮಾರು 1.48 ಲಕ್ಷ ಮೃತ ಮಹಿಳೆಯರ ಖಾತೆಗಳಿಗೆ ₹128 ಕೋಟಿಗೂ ಹೆಚ್ಚು ಮೊತ್ತ ಜಮೆಯಾಗಿರುವುದು ಅಧಿಕಾರಿಗಳನ್ನು ಬೆಚ್ಚಿಬೀಳಿಸಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ನಡೆಸಿದ ತಾಂತ್ರಿಕ ಪರಿಶೀಲನೆ ವೇಳೆ ಈ ದೊಡ್ಡ ಲೋಪ ಪತ್ತೆಯಾಗಿದೆ. ತಿಂಗಳಿಗೆ ₹2,000 ಸಹಾಯಧನ ಪಡೆಯುತ್ತಿದ್ದ ಅನೇಕ ಫಲಾನುಭವಿಗಳು ನಿಧನರಾಗಿದ್ದರೂ, ಅವರ ಹೆಸರಿನಲ್ಲಿದ್ದ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಲೇ ಇತ್ತು ಎಂಬ ಸಂಗತಿ ದಾಖಲೆಗಳ ಮೂಲಕ ದೃಢಪಟ್ಟಿದೆ.ಈ ನಿರ್ಲಕ್ಷ್ಯದಿಂದ ಸಾರ್ವಜನಿಕರ ತೆರಿಗೆ ಹಣ ಕೋಟ್ಯಂತರ ರೂಪಾಯಿಗಳಷ್ಟು ಅನರ್ಹರ ಕೈ ಸೇರಿದೆ ಎಂಬ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.

ಪರಿಶೀಲನೆ ವೇಳೆ ಮತ್ತೊಂದು ಆತಂಕಕಾರಿ ಅಂಶವೂ ಬೆಳಕಿಗೆ ಬಂದಿದೆ. ಮೃತ ಮಹಿಳೆಯರ ಖಾತೆಗಳಿಗೆ ಜಮೆಯಾಗಿದ್ದ ಹಣವನ್ನು ಅವರ ಕುಟುಂಬ ಸದಸ್ಯರು ಅಥವಾ ಸಂಬಂಧಿಕರು ಎಟಿಎಂ ಕಾರ್ಡ್ ಹಾಗೂ ಯುಪಿಐ ಸೇವೆಗಳ ಮೂಲಕ ಪಡೆಯುತ್ತಿದ್ದ ಪ್ರಕರಣಗಳು ಪತ್ತೆಯಾಗಿವೆ.ಸರ್ಕಾರದ ವ್ಯವಸ್ಥೆಯಲ್ಲಿದ್ದ ಲೋಪವನ್ನು ದುರುಪಯೋಗಪಡಿಸಿಕೊಂಡು ಹಣ ತೆಗೆಯಲಾಗಿರುವ ಸಾಧ್ಯತೆಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.

ಈ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಸಾರ್ವಜನಿಕ ಹಣದ ದುರ್ಬಳಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಸಂಪೂರ್ಣ ಮರುಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ಚಾಲ್ತಿಯಲ್ಲಿರುವ ಗೃಹಲಕ್ಷ್ಮಿ ಫಲಾನುಭವಿಗಳ ಲಿಸ್ಟ್ ಅನ್ನು ತಾತ್ಕಾಲಿಕವಾಗಿ ತಡೆಹಿಡಿದು, ಅರ್ಹ ಮಹಿಳೆಯರಿಂದ ಹೊಸದಾಗಿ ಅರ್ಜಿಗಳನ್ನು ಸ್ವೀಕರಿಸಲು ಚಿಂತನೆ ನಡೆಸಲಾಗಿದೆ. ಇದಲ್ಲದೆ ತಾಂತ್ರಿಕ ಲೋಪಗಳನ್ನು ತಡೆಯಲು ಇನ್ಮುಂದೆ ಇ-ಜನ್ಮ ಪೋರ್ಟಲ್ ಮೂಲಕ ಮರಣ ಪ್ರಮಾಣಪತ್ರಗಳನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ಲಿಂಕ್ ಮಾಡಲು ಸೂಚಿಸಲಾಗಿದೆ.ಫಲಾನುಭವಿಗಳು ಬದುಕಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ವಾರ್ಷಿಕವಾಗಿ ‘ಜೀವಿತ ಪ್ರಮಾಣ ಪತ್ರ’ (Life Certificate) ಸಲ್ಲಿಕೆ ಅಥವಾ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now