ಸುದ್ದಿಒನ್, ಹಿರಿಯೂರು, ಜನವರಿ. 12 : ನಗರದ ಗುರುಭವನದಲ್ಲಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಬಿ.ಸಿ. ಸಂಜೀವ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಶಿಮೂಲ್ ನಿರ್ದೇಶಕರಾದ ಬಿಸಿ. ರೇವಣಸಿದ್ದಪ್ಪ , ಜಿಬಿ ಶೇಖರಪ್ಪ ಭಾಗವಹಿಸಲಿದ್ದಾರೆ. ಹೊಸ ವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು ಕೋರಿ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುತ್ತದೆ. ನಂತರ ಸಂಕ್ರಾಂತಿ ಹಬ್ಬದ ಸಿಹಿ ವಿತರಿಸಲಾಗುವುದು.
ತಾಲೂಕಿನ ಎಲ್ಲಾ ಹಾಲು ಉತ್ಪಾದಕ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬಿ. ಸಿ. ಸಂಜೀವ ಮೂರ್ತಿ ಅವರು ಮನವಿ ಮಾಡಿದ್ದಾರೆ.