ನ್ಯೂಯಾರ್ಕ್: ಅಪಾರ್ಟ್‌ಮೆಂಟ್‌ ನಲ್ಲಿ ಬೆಂಕಿ, 9 ಮಕ್ಕಳು ಸೇರಿದಂತೆ ಕನಿಷ್ಠ 19 ಮಂದಿ ಸಾವು

ನ್ಯೂಯಾರ್ಕ್‌ : ಇಲ್ಲಿನ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಒಂಬತ್ತು ಮಕ್ಕಳು ಸೇರಿದಂತೆ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ.

ಈ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡ
32 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ನ್ಯೂಯಾರ್ಕ್ ಮೇಯರ್ ಎರಿಕ್ ಆಡಮ್ಸ್ ಹೇಳಿದ್ದಾರೆ.

19 ಅಂತಸ್ತಿನ ಕಟ್ಟಡದ ಎರಡನೇ ಮತ್ತು ಮೂರನೇ ಮಹಡಿಗಳಲ್ಲಿ ಬೆಳಗಿನ ಜಾವ ಈ ದುರಂತ ಸಂಭವಿಸಿದ್ದು, ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ಕನಿಷ್ಠ 200 ಅಗ್ನಿಶಾಮಕ ಮತ್ತು ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *