ದಾವಣಗೆರೆ (ಡಿ.28) : ಒಮಿಕ್ರಾನ್ ರೂಪಾಂತರ ವೈರಾಣು ಹೊರಹೊಮ್ಮುತ್ತಿರುವ ಈ ಸನ್ನಿವೇಶದಲ್ಲಿ ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕಾಕರಣ ಮತ್ತು ಕೋವಿಡ್ 19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಸಲುವಾಗಿ ಡಿಸೆಂಬರ್ 28 ರಿಂದ ಜನವರಿ 7 ರವರಗೆ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರಗೆ ರಾತ್ರಿ ಕಫ್ರ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಡಿಸೆಂಬರ್ 30 ರಿಂದ ಜನವರಿ 2 ರವರಗೆ ರೆಸ್ಟೋರೆಂಟ್ಸ್, ಹೋಟೆಲ್‍ಗಳು, ಕ್ಲಬ್, ಪಬ್‍ಗಳಲ್ಲಿ ಶೇ. 50 ರಷ್ಟು ಆಸನ ಸಾಮಥ್ರ್ಯದೊಂದಿಗೆ ಕೋವಿಡ್ ಸಮುಚಿತ ವರ್ತನೆಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ.
ಮದುವೆಗಳು ಸೇರಿದಂತೆ ಎಲ್ಲಾ ವಿಧವಾದ ಸಭೆ ಸಮಾರಂಭಗಳಲ್ಲಿ 300 ಕ್ಕಿಂತ ಹೆಚ್ಚಾಗಿ ಜನ ಸೇರದಂತೆ ನೋಡಿಕೊಳ್ಳಬೇಕು, ನಿಯಮ ಉಲ್ಲಂಘಿಸಿದಲ್ಲಿ ಆಯೋಜಕರ ಮೇಲೆ ಕ್ರಮ ಜರುಗಿಸಲಾಗುವುದು. ಸರ್ಕಾರದ ಮಾರ್ಗಸೂಚಿ, ನಿಬಂಧನೆಗಳನ್ನು ಯಾವುದೇ ವ್ಯಕ್ತಿ ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಕರ್ನಾಟಕ ಸಾಂಕ್ರಾಮಿಕ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.