Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋವಿಡ್ ಮಾರ್ಗಸೂಚಿ ವಿಸ್ತರಣೆ : ರಾತ್ರಿ 10 ರಿಂದ ಬೆಳಿಗ್ಗೆ 5 ರವರಗೆ ರಾತ್ರಿ ಕಫ್ರ್ಯೂ

Facebook
Twitter
Telegram
WhatsApp

 

ದಾವಣಗೆರೆ (ಡಿ.28) : ಒಮಿಕ್ರಾನ್ ರೂಪಾಂತರ ವೈರಾಣು ಹೊರಹೊಮ್ಮುತ್ತಿರುವ ಈ ಸನ್ನಿವೇಶದಲ್ಲಿ ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕಾಕರಣ ಮತ್ತು ಕೋವಿಡ್ 19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಸಲುವಾಗಿ ಡಿಸೆಂಬರ್ 28 ರಿಂದ ಜನವರಿ 7 ರವರಗೆ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರಗೆ ರಾತ್ರಿ ಕಫ್ರ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಡಿಸೆಂಬರ್ 30 ರಿಂದ ಜನವರಿ 2 ರವರಗೆ ರೆಸ್ಟೋರೆಂಟ್ಸ್, ಹೋಟೆಲ್‍ಗಳು, ಕ್ಲಬ್, ಪಬ್‍ಗಳಲ್ಲಿ ಶೇ. 50 ರಷ್ಟು ಆಸನ ಸಾಮಥ್ರ್ಯದೊಂದಿಗೆ ಕೋವಿಡ್ ಸಮುಚಿತ ವರ್ತನೆಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ.

ಮದುವೆಗಳು ಸೇರಿದಂತೆ ಎಲ್ಲಾ ವಿಧವಾದ ಸಭೆ ಸಮಾರಂಭಗಳಲ್ಲಿ 300 ಕ್ಕಿಂತ ಹೆಚ್ಚಾಗಿ ಜನ ಸೇರದಂತೆ ನೋಡಿಕೊಳ್ಳಬೇಕು, ನಿಯಮ ಉಲ್ಲಂಘಿಸಿದಲ್ಲಿ ಆಯೋಜಕರ ಮೇಲೆ ಕ್ರಮ ಜರುಗಿಸಲಾಗುವುದು.  ಸರ್ಕಾರದ ಮಾರ್ಗಸೂಚಿ, ನಿಬಂಧನೆಗಳನ್ನು ಯಾವುದೇ ವ್ಯಕ್ತಿ ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಕರ್ನಾಟಕ ಸಾಂಕ್ರಾಮಿಕ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಮಳೆ | ಜಿಲ್ಲೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ?

ಚಿತ್ರದುರ್ಗ. ಮೇ.17 : ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು ಸಂಜೆ 6 ಗಂಟೆಯ ನಂತರ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಡುಗು ಸಹಿತ  ಮಳೆಯಾಗುತ್ತಿದೆ. ಮಳೆ ಆರಂಭವಾಗಿ ಅರ್ಧ ಗಂಟೆಯ ನಂತರವೂ ಮಳೆ ಮುಂದುವರೆದಿದ್ದು ಉತ್ತಮವಾಗಿ

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

error: Content is protected !!