ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ. ಜೆಡಿಎಸ್ ನಿರೀಕ್ಷಿಸಿದ ಹಂತಕ್ಕೆ ಜಯ ಗಳಿಸಲಿಲ್ಲ. ಕಾಂಗ್ರೆಸ್ ಸರ್ಕಾರ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿದೆ. ಇದೀಗ ಜೆಡಿಎಸ್ ಸೋಲಿನ ಹೊಣೆಯನ್ನು ಹೊತ್ತಿರುವ ನಿಖಿಲ್ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ.
ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೊಸ ನಾಯಕತ್ವಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಸದ್ಯಕ್ಕೆ ರಾಜ್ಯಾಧ್ಯಕ್ಷರಾಗಿರುವ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಪಕ್ಷದ ಜೊತೆಗೆ ಸದಾ ಇರುತ್ತೇನೆ ಎಂದು ತಿಳಿಸಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ಗೆಲ್ಲುವ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಅವರು ಈ ಬಾರಿಯ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧೆ ಮಾಡಿದ್ದರು. ಆದರೆ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ಸಾಧಿಸಿದ್ದಾರೆ ಎರಡನೇ ಬಾರಿ ಸೋಲಾಗುದ್ದು, ಮತ್ತೆ ಹುಮ್ಮಸ್ಸಿನಿಂದ ಪುಟಿದೇಳಲು ಹೊರಟಿದ್ದಾರೆ ನಿಖಿಲ್ ಕುಮಾರಸ್ವಾಮಿ. ಪಕ್ಷ ಸಂಘಟನೆ ಮಾಡಲಿದ್ದಾರೆ. ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದು ಹಿಂಜರಿಯುವುದಿಲ್ಲ ಎಂದು ತಿಳಿಸಿದ್ದಾರೆ.