Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದೇವೇಗೌಡರನ್ನ ಭೇಟಿಯಾದ ನಿರ್ಮಲಾನಂದ ಸ್ವಾಮೀಜಿ

---Advertisement---

 

ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ಇನ್ನೆರಡು ದಿನದಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಕುಮಾರಸ್ವಾಮಿ ಅವರು ಕೂಡ ಮಾಹಿತಿಯನ್ನ ನೀಡಿದ್ದಾರೆ. ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಗಳು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯವನ್ನ ವಿಚಾರಿಸಿದ್ದಾರೆ.

ಮಣಿಪಾಲ್ ಆಸ್ಪತ್ರೆಯಲ್ಲಿ ದೇವೇಗೌಡ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ನಿರ್ಮಲಾನಂದ ಸ್ವಾಮಿಗಳು ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ, ಕೆಲ ಕಾಲ ದೇವೇಗೌಡರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಬಳಿಕ ವೈದ್ಯರ ಬಳಿಯೂ ದೇವೇಗೌಡ ಅವರ ಆರೋಗ್ಯದ ಬಗ್ಗೆ ಮಾಹಿತಿ ಕೇಳಿದ್ದಾರೆ. ಟ್ರೀಟ್ಮೆಂಟ್ ಎಲ್ಲಾ ಚೆನ್ನಾಗಿ ಆಗಲಿ ಎಂದಿದ್ದಾರೆ. ವೈದ್ಯರು ಕೂಡ ದೇವೇಗೌಡ ಅವರ ಆರೋಗ್ಯ ಪರಿಸ್ಥಿತಿ ಹೇಗಿದೆ..? ಚಿಕಿತ್ಸೆಗೆ ಹೇಗೆ ಸ್ಪಂದಿಸ್ತಾ ಇದ್ದಾರೆ ಎಂಬೆಲ್ಲಾ ಮಾಹಿತಿಯನ್ನು ನೀಡಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ ಅವರು ಮೂತ್ರ ಸೋಂಕಿನಿಂದ ಬಳಲುತ್ತಿದ್ದರು. ಸೋಂಕಿನಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವೈದ್ಯರು ಕೂಡ ಸಾಕಷ್ಟು ಕಾಳಜಿ ವಹಿಸಿದ್ದು, ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಸರಿಯಾದ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ದೇವೇಗೌಡ ಅವರು ಈ ಇಳಿ ವಯಸ್ಸಿನಲ್ಲೂ ರಾಜಕೀಯದಲ್ಲಿ ಆಕ್ಟೀವ್ ಆಗಿನೆ ಇದ್ದಾರೆ. ಅನಾರೋಗ್ಯ ಕಾಡುವುದಕ್ಕೂ ಒಂದೆರಡು ದಿನ ಮೊದಲು ಒಂದು ಸುದ್ದಿಗೋಷ್ಟಿಯನ್ನ ನಡೆಸಿದ್ದರು. ಈ ಸುದ್ದಿಗೋಷ್ಟಿಯಲ್ಲಿ ರಾಜಕೀಯದ ವಿಚಾರವಾಗಿ ಮಾತನಾಡಿದ್ದರು. ಪಕ್ಷ ಸಂಘಟನೆ, ಕಾರ್ಯಕರ್ತರಿಗೆ ಪ್ರೊಇತ್ಸಾಹ ನೀಡುವುದು ಎಲ್ಲವನ್ನು ಈ ವಯಸ್ಸಿನಲ್ಲೂ ಮಾಡುತ್ತಾರೆ. ಮೊಮ್ಮಗನಿಗೆ ಸಲಹೆಗಳನ್ನು ಕೊಡುತ್ತಾ ರಾಜಕೀಯದಲ್ಲಿ ಸದಾ ಕ್ರಿಯಾಶೀಲರಾಗಿದ್ದಾರೆ. ಸದ್ಯಕ್ಕೆ ಆರೋಗ್ಯ ಪರಿಸ್ಥಿತಿ ಸುಧಾರಿಸುತ್ತಿದ್ದು, ಆದಷ್ಟು ಬೇಗ ಮನೆಗೆ ಬರಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...