Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ರಾಜೀನಾಮೆ ಹಿನ್ನೆಲೆ ಜಿಲ್ಲಾ ಕುರುಬ ಸಂಘದ ಪತ್ರಿಕಾಗೋಷ್ಠಿಗೆ ನಿಶಾನಿ ಜಯಣ್ಣ ವ್ಯಂಗ್ಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಮೇ. 31 : ಜಿಲ್ಲಾ ಕುರುಬ ಸಂಘದವರು ಇಂದು ನಡೆಸಿದ ಪ್ರತಿಕಾಗೋಷ್ಠಿ ಯಾವ ಪುರುಷರ್ಥಕ್ಕೆ ಅಥವಾ ಯಾವ ನೈತಿಕತೆಯಿಂದ ಕರೆದಿದ್ದರೆ ಗೊತ್ತಿಲ್ಲ ಎಂದು ಜಿಲ್ಲಾ ಕುರುಬ ಸಂಘದ ಮಾಜಿ ಅಧ್ಯಕ್ಷರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರು ಹಾಗೂ ಚಿತ್ರದುರ್ಗ ಟೌನ್ ಕೋ ಆಪರೇಟಿವ್ ಸೊಸೈಟಿ ಲಿ. ಅಧ್ಯಕ್ಷರಾದ ಒ. ನಿಶಾನಿ ಜಯಣ್ಣ ಟೀಕಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಈಗ ಸಿದ್ದರಾಮಯ್ಯ ರವರು ಮುಖ್ಯಮಂತ್ರಿ ಸ್ಥಾನಕ್ಕೆ  ರಾಜೀನಾಮೆ ನೀಡಿದಾಗ ಪ್ರತಿಕ್ರಿಯೆ ನೀಡುವ ಜಿಲ್ಲಾ ಕುರುಬರ ಸಂಘದವರು ಜನತಾದಳ ಪಕ್ಷದಿಂದ ಸಿದ್ದರಾಮಯ್ಯನವರನ್ನು ಉಚ್ಛಾಟಿಸಿದಾಗ ಕಾಂಗ್ರೆಸ್ ಅಧಿನಾಯಕಿ ಶ್ರೀಮತಿ ಸೋನಿಯಾ ಗಾಂಧಿಯವರ ಸಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿ ಸುದೀರ್ಘ 17 ವರ್ಷ CLP ಲೀಡರ್ ಆಗಿ, 2 ಬಾರಿ ವಿರೋಧ ಪಕ್ಷದ ನಾಯಕರಾಗಿ, ದಾಖಲೆ 8 ವರ್ಷ ಮುಖ್ಯಮಂತ್ರಿ ಆಗಿ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಕೆಲವು ಜನ ನಾವೇ ಕುರುಬ ಸಂಘದ ಪದಾಧಿಕಾರಿಗಳು ಎಂದು ಹೇಳಿಕೊಂಡು ಸುದ್ದಿ ಗೋಷ್ಠಿ ಕರೆದಿದ್ದರೆ ಪದಾಧಿಕಾರಿಗಳನ್ನು ಯಾರು ಆಯ್ಕೆ ಮಾಡಿದ್ದಾರೆ ಎಂಬುದೇ ಯಕ್ಷ ಪ್ರಶ್ನೆ. 4 ಮಂದಿ ಸೇರಿಕೊಂಡು ನಾನೇ ಅಧ್ಯಕ್ಷ, ನಾನೇ ಕಾರ್ಯದರ್ಶಿ, ನಾನೇ ಖಜಾಂಜಿ ಎಂದು ತಮಗೆ ತಾವೇ ಘೋಷಿಸಿಕೊಂಡಿದ್ದಾರೆ. ಇದುವರೆಗೂ ಯಾವ ಚುನಾವಣೆ ನೆಡೆಸಿಲ್ಲ, ಸಮಾಜದವರು ಸಮ್ಮುಖದಲ್ಲಿಯೂ ಆಯ್ಕೆ ಆಗಿಲ್ಲ. ಇಂಥ ಸಮಯದಲ್ಲಿ ಸುದ್ದಿ ಗೋಷ್ಠಿ ಮಾಡುತ್ತಿರುವುದು ನಿಮ್ಮಗಳ ಪ್ರಚಾರಕ್ಕೆ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತದೆ. ಎಲ್ಲಾ ಮುಗಿದಮೇಲೆ ಇವಾಗ ಇವರಿಗೆ ಜ್ಞಾನೋದಯವಾಗಿದೆ ನಮ್ಮ ಸಮಾಜದವರಿಗೆ. ಇವಾಗ ಪತ್ರಿಕಾ ಗೋಷ್ಠಿ ಮಾಡುವುದರಲ್ಲಿ ಯಾವುದೇ ಅರ್ಥ ಇರುವುದಿಲ್ಲ ಎಂದು ಒ. ನಿಶಾನಿ ಜಯಣ್ಣ ವ್ಯಂಗವಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now