Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ಥಳೀಯ ಚುನಾವಣೆಗಳಿಗೆ ನೋ ಮೈತ್ರಿ : ದೇವೇಗೌಡ್ರು ಹೇಳಿದ್ದೇನು..?

---Advertisement---

ಬೆಂಗಳೂರು: ರಾಜ್ಯದಲ್ಲಿ ಸದ್ಯ ಬಿಜೆಪಿ ಜೊತೆಗೆ ಜೆಡುಎಸ್ ಕೈ ಜೋಡಿಸಿದೆ. ಎಲ್ಲಾ ಚುನಾವಣೆಗಳಲ್ಲೂ ಒಟ್ಟೊಟ್ಟಿಗೇನೆ ಸಾಗುತ್ತಾ ಇದ್ದಾರೆ. ಅದೇ ಮೈತ್ರಿ ಸ್ಥಳೀಯ ಚುನಾವಣೆಗಳಲ್ಲಿಯೂ ಮುಂದುವರೆಯುತ್ತಾ ಎಂಬುದು ಹಲವರುಗೆ ಅನುಮಾನ. ಆ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.

 

ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ – ಜೆಡಿಎಸ್ ಮೈತ್ರಿ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇಲ್ಲ. ಹಾಸನದಲ್ಲಿ ಜನವರಿ 23ರಂದು, ಬೆಂಗಳೂರಿನಲ್ಲಿ ಜನವರಿ 18 ರಂದು ಸಭೆ ಮಾಡ್ತಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವೂ ಪ್ರತ್ಯೇಕವಾಗಿ ಹೋರಾಟ ಮಾಡುತ್ತೇವೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಜೊತೆಗೆ ಇರುತ್ತೇವೆ. ವಿಧಾನ ಪರಿಷತ್ 4 ಸ್ಥಾನಗಳ ಚುನಾವಣೆಯಲ್ಲಿ ಒಂದು ಸ್ಥಾನ ಜೆಡಿಎಸ್ ಗೆ ಮೂರು ಸ್ಥಾನ ಬಿಜೆಪಿಗೆ ನೀಡುವ ಬಗ್ಗೆ ಪ್ರಾಥಮಿಕ ಚರ್ಚೆ ಕೂಡ ಆಗಿದೆ ಎಂದಿದ್ದಾರೆ.

ಇದೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಹೇಳಿಕೆಗೂ ತಿರುಗೇಟು ಕೊಟ್ಟಿದ್ದಾರೆ. 130-140 ಸ್ಥಾನಗಳೊಂದಿಗೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತೆ ಎಂದು ಹೇಳುವ ಮೂಲಕ ವಿಜಯೇಂದ್ರ ಅವರು ಮೈತ್ರಿಯನ್ನ ತಳ್ಳಿ ಹಾಕಿದ್ದರು. ವಿಜಯೇಂದ್ರ ಬಹಳ ಉತ್ಸಾಹದಿಂದ ಓಡಾಡುತ್ತಿದ್ದಾರೆ. ಯಂಗ್ ಸ್ಟಾರ್ ರೀತಿ ಕೆಲಸ ಮಾಡ್ತಿದ್ದಾರೆ. ಸ್ಥಳೀಯ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಮೋದಿ, ಶಾ ಜೊತೆಗೆ ಚರ್ಚೆ ಮಾಡಲು ಆಗಲ್ಲ. ಮೋದಿ, ಶಾ ಜೊತೆಗೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡ್ತೀವಿ ಅಂತೇಳುವ ಮೂಲಕ ಮೈತ್ರಿ ಇದೆ ಎಂದು ಮತ್ತೆ ಪುನರುಚ್ಚರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...