ಯಾವುದೇ ಕಂಡಿಷನ್ ಹಾಕಿ ಬಂದಿಲ್ಲ.. ಅದಕ್ಕೆ ಈ ಸ್ಥಾನಮಾನ ಸಿಕ್ಕಿದೆ : ಜಗದೀಶ್ ಶೆಟ್ಟರ್

1 Min Read

 

ಬೆಂಗಳೂರು: ಕಾಂಗ್ರೆಸ್ ನಿಂದ ಮೂವರಿಗೆ ಎಂಎಲ್ಸಿ ಟಿಕೆಟ್ ಘೋಷಣೆ ಮಾಡಲಾಗಿದೆ. ಜೂನ್ 30ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದೆ. ಎಂಎಲ್ಸಿ ಟಿಕೆಟ್ ಪಡೆದ ಜಗದೀಶ್ ಶೆಟ್ಟರ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಬರುವಾಗ, ಯಾವುದೇ ರೀತಿಯ ಕಂಡೀಷನ್ ಹಾಕಿ ಬಂದಿಲ್ಲ. ಹೀಗಾಗಿ ಸೂಕ್ತ ಸ್ಥಾನಮಾನ ನೀಡಿದ್ದಾರೆ ಎಂದಿದ್ದಾರೆ.

ಮುಂದಿನ ದಿನಗಳಲ್ಲೂ ಕಾಂಗ್ರೆಸ್ ಪಕ್ಷ ನನ್ನನ್ನು ತುಂಬಾ ಚೆನ್ನಾಗಿ ನಡೆಸಿಕೊಳ್ಳಲಿದೆ. ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಅದರ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ. ಯಾವ ರೀತಿಯ ತೀರ್ಮಾನ ಮಾಡುತ್ತೋ ಅದಕ್ಕೆ ಬದ್ಧನಾಗಿದ್ದೇನೆ ಎಂದಿದ್ದಾರೆ. ಇನ್ನು ಎಂಎಲ್ಸಿ ಟಿಕೆಟ್ ಸಿಕ್ಕಿದ್ದಕ್ಕೆ ಖುಷಿಯಾಗಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದೆ ಇದ್ದ ಕಾರಣಕ್ಕೆ ಕಾಂಗ್ರೆಸ್ ಕಡೆಗೆ ಬಂದಿದ್ದರು. ಕಾಂಗ್ರೆಸ್ ನಿಂದ ತಮ್ಮದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೂ ಸಹ ಸೋಲು ಅನುಭವಿಸಿದ್ದರು. ಆದರೂ ಕಾಂಗ್ರೆಸ್ ನಾಯಕರು ನಾವಿದ್ದೇವೆ ಎಂದು ತಿಳಿಸಿದ್ದರು. ಅದರಂತೆ ಈಗ ಎಂಎಲ್ಸಿ ಟಿಕೆಟ್ ನೀಡಿ, ಹಿರಿಯ ನಾಯಕನಿಗೆ ಗೌರವ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks