ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಥಗಿತದಿಂದ ಮೂವರು ರೋಗಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಪ್ರಾಯೋಜಿತ ಕೊಲೆ ಎಂದು ಆರೋಪಿಸಿದ್ದರು. ಇದೀಗ ಸಿದ್ದರಾಮಯ್ಯ ಅವರ ಆರೋಪಕ್ಕೆ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
ವಿಮ್ಸ್ ಗೆ ಸುಮಾರು 150 ವರ್ಷಗಳ ಇತಿಹಾಸವಿದೆ. ಅವತ್ತು ಆಸ್ಪತ್ರೆಗೆ ಶಾರ್ಟ್ ಸರ್ಕ್ಯೂಟ್ ಆಗಿತ್ತು. ಆದರೆ ಆಸ್ಪತ್ರೆಯಲ್ಲಿನ ಯುಪಿಎಸ್ ಗಳು ಕೆಲಸ ಮಾಡುತ್ತಿದ್ದವು. ಇದನ್ನು ಸರ್ಕಾರಿ ಪ್ರಾಯೋಜಿತ ಕೊಲೆ ಎಂಬ ಪದ ಬಳಸಬಾರದು. ಸಿದ್ದರಾಮಯ್ಯ ಅವರು ಕೊಲೆ ಎಂದು ಪದ ಬಳಸಿದ್ದು ಸರಿಯಲ್ಲ. ಇದು ಸರಿ ಅಲ್ಲ. ಹೀಗಾಗಿ ನಾನು ಆಕ್ಷೇಪ ವ್ಯಕ್ತಪಡಿಸಿದೆ. ವಿಮ್ಸ್ ನಲ್ಲಿ ವಿದ್ಯುತ್ ಸಮಸ್ಯೆಯಿಂದ ಸಾವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಳ್ಳಾರಿಯ ವಿಮ್ಸ್ ನಲ್ಲಿ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಂಬಂಧ ಇಂದು ಕಲಾಪದಲ್ಲಿ ಶೂನ್ಯ ವೇಳೆಯಲ್ಲಿ ಸರ್ಕಾರದ ಗಮನಕ್ಕೆ ತಂದ ಸಿದ್ದರಾಮಯ್ಯ, ಜನರೇಟ್ ಕೆಟ್ಟು ನಿಂತು, ಕರೆಂಟ್ ಇಲ್ಲದೆ, ಆಸ್ಪತ್ರೆಯಲ್ಲಿದ್ದ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ಇದಕ್ಕೆ ಯಾರು ಜವಬ್ದಾರರು. ಆಸ್ಪತ್ರೆಯವರು ಹೊಣೆನಾ..? ಸರ್ಕಾರ ಹೊಣೆನಾ..? ಈ ಸಾವಿಗೆ ಸರ್ಕಾರವೇ ಹೊಣೆ ಹೊರಬೇಕು. ರೋಗಿಗಳ ಸಾವು ಸರ್ಕಾರಿ ಪ್ರಾಯೋಜಿತ ಕೊಲೆ ಎಂದಿದ್ದರು.