ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಕೊಡದಂತೆ ಆದೇಶ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ವರ್ಷ ಗ್ರೇಸ್ ಮಾರ್ಕ್ಸ್ ಕೊಟ್ಟ ವಿಚಾರಕ್ಕೆ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಇಪ್ಪತ್ತು ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ. ಯಾವ ಕಾರಣ ಮತ್ತು ಯಾವ ಉದ್ದೇಶದಿಂದ ಗ್ರೇಸ್ ಮಾರ್ಕ್ಸ್ ನೀಡಲಾಗಿದೆ. ಗ್ರೇಸ್ ಮಾರ್ಕ್ಸ್ ನೀಡಲು ನಿಮಗೆ ಹೇಳಿದ್ದು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.ಗ್ರೇಸ್ ಮಾರ್ಕ್ಸ್ ನೀಡಿದರೆ ಸ್ಪರ್ಧ ಸಾಮರ್ಥ್ಯ ಕಡಿಮೆ ಆಗುವುದಿಲ್ಲ. ವಿದ್ಯಾರ್ಥಿಗಳು ಯಾವತ್ತಿಗೂ ಅವರ ಅರ್ಹತೆ ಆಧಾರದಲ್ಲಿ ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಈ ವರ್ಷ ಮಾತ್ರ ಗ್ರೇಸ್ ಮಾರ್ಕ್ಸ್ ಕೊಡಲು ತೀರ್ಮಾನಿಸಲಾಗಿತ್ತು. ಸಿಎಂ ಇದರ ಬಗ್ಗೆ ಸಭೆಯಲ್ಲಿ ಮಾಹಿತಿ ಕೇಳಿದ್ದರು. ಪರೀಕ್ಷಾ ನಡವಳಿಕೆ ಸರಿಮಾಡಲಯ ಮುಂದಾಗಿದ್ದೆವು.ಈಗ ಕೊಟ್ಟಿರುವ ಗ್ರೇಸ್ ಮಾರ್ಕ್ಸ್ ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.
ಇನ್ನು ಈ ಗ್ರೇಸ್ ಮಾರ್ಕ್ಸ್ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು, ಕಡಿಮೆ ಅಂಕ ಪಡೆದರೆ ವಿದ್ಯಾರ್ಥಿಗಳು ಅನರ್ಹರಾ ಎಂದು ಪ್ರಶ್ನೆ ಮಾಡಿದ್ದಾರೆ.