ನವದೆಹಲಿ: ಎಲ್ಲೆಡೆ ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಒಮಿಕ್ರಾನ್ ಆತಂಕವೂ ಹೆಚ್ಚಾಗಿದೆ. ಈಗಾಗಲೇ ಎಲ್ಲೆಡೆ ಕೊರೊನಾ ಟಫ್ ರೂಲ್ಸ್ ಜಾರಿಯಲ್ಲಿದೆ. ಈ ಮಧ್ಯೆ ಲಾಕ್ಡೌನ್ ಮಾಡ್ತಾರಾ ಎಂಬ ಭಯ ಜನರನ್ನು ಕಾಡುತ್ತಿದೆ.
ಈ ಬಗ್ಗೆ ದೆಹಲು ಸಿಎಂ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದು, ಜನ ಅವರ ಸುರಕ್ಷತೆಯಲ್ಲಿ ಅವರಿರಬೇಕು. ಆಗ ಲಾಕ್ಡೌನ್ ಮಾಡುವ ಪ್ರಮೇಯವೇ ಬರುವುದಿಲ್ಲ. ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಪ್ರಮಾಣ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದ್ರೆ ಸದ್ಯಕ್ಕಂತು ಲಾಕ್ಡೌನ್ ಮಾಡುವ ಉದ್ದೇಶ ನಮ್ಮದಲ್ಲ ಎಂದಿದ್ದಾರೆ.
ಜನರು ಸರಿಯಾದ ಕ್ರಮದಲ್ಲಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದೇ ಇದ್ದಲ್ಲಿ ಲಾಕ್ಡೌನ್ ಮಾಡಲಾಗುತ್ತದೆ. ಕೊರಿನಾ ನಿಯಮಗಳನ್ನ ಪಾಲನೆ ಮಾಡಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.