ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 :
ಜನಸಂಖ್ಯೆಯ ಪರಿಪೂರ್ಣ ಮಾಹಿತಿ ಇಲ್ಲದೆ ಇರುವುದರಿಂದ ಒಳಮೀಸಲಾತಿ ಬೇಡ ಎಂದು ಭೋವಿ ಗುರುಪೀಠದ ಜಗದ್ಗರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ಮಾಧ್ಯಮ ಪ್ರಕಟಣೆ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರವು ಇತ್ತೀಚೆಗೆ ಹೊರಡಿಸಿರುವ ನೇಮಕಾತಿ ರೋಸ್ಟರ್ ಬಿಂದು ನಿಗದಿ ಪಡಿಸಿದ ಆದೇಶವು ಪ್ರವರ್ಗ ಬಿ ಮತ್ತು ಪ್ರವರ್ಗ ಸಿ ಸಮುದಾಯಗಳಿಗೆ “ಮರಣಶಾಸನ” ವಾಗಿದೆ. ಈ ಕೂಡಲೇ ಸರ್ಕಾರವು ಈ ಆದೇಶವನ್ನು ಹಿಂಪಡೆಯಬೇಕು ಎಂಬ ಆಗ್ರಹಿಸುತ್ತೇವೆ.
ಕೇಂದ್ರ ಸರ್ಕಾರ ನಡೆಸುತ್ತಿರುವ ಜನಗಣತಿಯ ಸಂಪೂರ್ಣ ಮಾಹಿತಿ ಲಭ್ಯವಾಗುವವರೆಗೆ ಒಳ ಮೀಸಲಾತಿ ಜಾರಿಗೊಳಿಸುವುದು ಸರಿಯಲ್ಲ .
ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟವು ತರಾತುರಿಯಲ್ಲಿ ಅಥವಾ ಏಕಪಕ್ಷೀಯವಾಗಿ ತೀರ್ಮಾನ ಕೈಗೊಂಡರೆ ಅದನ್ನು ವಿರೋಧಿಸುತ್ತೇವೆ.
ಸರ್ಕಾರವು ಏಕಪಕ್ಷೀಯ ನಿರ್ಧಾರ ಕೈಗೊಂಡರೆ ಭೋವಿ, ಲಂಬಾಣಿ, ಕೊರಚ ಮತ್ತು ಕೊರಮ ಸಮುದಾಯಗಳು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಿವೆ.
















