Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಕೋಟೆ ಮುಂಭಾಗ ಮತ್ತೊಂದು ಟಿಕೆಟ್ ಕೌಂಟರ್ ಬೇಡ: ಪುರಾತತ್ವ ಇಲಾಖೆಗೆ ಹೆಚ್.ಶ್ರೀನಿವಾಸ್ ಮನವಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 27 : ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕೋಟೆ ಮುಂಭಾಗ ಟಿಕೆಟ್ ಕೌಂಟರ್ ಇದ್ದರೂ ಮತ್ತೊಂದು ಟಿಕೆಟ್ ಕೌಂಟರ್ ತೆರೆಯಲು ಹೊರಟಿರುವುದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತದೆಂದು ನಗರಸಭೆ ಸ್ಥಾಯಿ ಸಮಿತಿ ಮಾಜಿ ಸದಸ್ಯ ಹೆಚ್.ಶ್ರೀನಿವಾಸ್ ಪುರಾತತ್ವ ಇಲಾಖೆ ಅಧಿಕಾರಿ ಸುಧೀರ್  ಸೋಮವಾರ ಮನವಿ ಸಲ್ಲಿಸಿದರು.

ಹಾಲಿ ಇರುವ ಟಿಕೆಟ್ ಕೌಂಟರ್‍ನಿಂದ ಯಾರಿಗೂ ತೊಂದರೆಯಾಗುತ್ತಿಲ್ಲ. ಕಾಮನಬಾವಿ ಬಡಾವಣೆಯಲ್ಲಿ ವಾಸಿಸುತ್ತಿರುವ ಸಾವಿರಾರು ಜನ ಹಾಗೂ ಬೆಳಿಗ್ಗೆ ಮತ್ತು ಸಂಜೆ ವಾಯುವಿಹಾರಿಗಳಿಗೆ ಹೊಸ ಕೌಂಟರ್ ತೆರೆಯುವುದರಿಂದ ಸಂಚಾರಕ್ಕೆ ಅಡಚಣೆಯಾಗಲಿದೆ. ಅದಕ್ಕಾಗಿ ಹೊಸದಾಗಿ ಟಿಕೆಟ್ ಕೌಂಟರ್ ತೆರೆಯುವುದು ಬೇಡವೆಂದು ಶ್ರೀನಿವಾಸ್ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ, ನಗರಸಭೆ ಮಾಜಿ ಸದಸ್ಯ ರವಿಕುಮಾರ್, ಸಿದ್ದಪ್ಪ, ಪಿ.ರಮೇಶಾಚಾರ್, ಪಿ.ರಮೇಶ್, ಪ್ರಾಣೇಶ್
ತಿಪ್ಪೇಶ್, ಸತೀಶ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now