Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೈಕಮಾಂಡ್ ಹೇಳುವ ಅಗತ್ಯವಿಲ್ಲ.. 2 ವರ್ಷ ಸಿದ್ದರಾಮಯ್ಯ ಅವರೇ ಸಿಎಂ : ಪರಮೇಶ್ವರ್

---Advertisement---

ಮೈಸೂರು: ಸಿಎಂ ಕುರ್ಚಿ ಬದಲಾವಣೆಯ ವಿಚಾರ ಇನ್ನೂ ಕೂಡ ತಣ್ಣಗಾಗಿಲ್ಲ. ಸದ್ಯ ರಾಜ್ಯದಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಾವು ಜೋರಾಗಿದೆ. ಹೀಗಾಗಿ ಕಾಂಗ್ರೆಸ್ ನ ಘಟಾನುಘಟಿಗಳೇ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಸಿಎಂ ವಿಚಾರ ಸದ್ಯಕ್ಕೆ‌ ನಿಂತಿದೆ. ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಉಳಿದ ಎರಡೂವರೆ ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಪರಮೇಶ್ವರ್ ಅವರು, ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ನೀಡುವ ಅವಶ್ಯಕತೆ ಇಲ್ಲ. ಹೈಕಮಾಂಡ್ ಯಾವ ಗೊಂದಲಗಳನ್ನು ಸೃಷ್ಟಿ ಮಾಡಿಲ್ಲ. ಯಾರೂ ಏನೇ ಹೇಳಿದರು ಅದು ಮುಖ್ಯ ಅಲ್ಲ.

ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಎಂದು ಹೇಳಿದ್ಯಾ? ಬದಲಾವಣೆ ಬಗ್ಗೆ ಮಾತನಾಡಿದ್ದಾರಾ? ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆ ಇಲ್ಲ. ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದ್ರು ಅದು ವೈಯಕ್ತಿಕ ಅಭಿಪ್ರಾಯ ಎಂದರು. ನಮ್ಮ ಎಲ್ಲಾ ಶಾಸಕರು ಸಿಎಂ ಸ್ಥಾನಕ್ಕೆ ಅರ್ಹರು ಎಂದು ಸಿಎಂ ವಿಧಾನಸಭೆಯಲ್ಲೇ ಹೇಳಿದ್ದಾರೆ. ಅದರಲ್ಲಿ ನಾನು ಅರ್ಹ ಇನ್ನೊಬ್ಬರು ಎಂಬ ಪ್ರಶ್ನೆಯೇ ಬರುವುದಿಲ್ಲ. ಉಪಚುನಾವಣೆಯ ಫಲಿತಾಂಶಕ್ಕೂ ಬೇರೆ ವಿಚಾರಕ್ಕೆ ಸಂಬಂಧವೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now