ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗೆ ಹೆದರಬೇಕಿಲ್ಲ : ಬಿ.ವೈ. ವಿಜಯೇಂದ್ರ

1 Min Read

 

ಬೆಂಗಳೂರು: ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ.

ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ. ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಛೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಮೇಲೆ ಪಕ್ಷ ಸಂಘಟನೆಯಲ್ಲಿ ಇನ್ನಷ್ಟು ಹೆಚ್ಚು ತೊಡಗಿದ್ದಾರೆ. ಮುನಿಸಿಕೊಂಡಿರುವ ಹಿರಿಯರನ್ನು ಮನವೊಲಿಸುವ ಕೆಲಸವಾಗುತ್ತಿದೆ. ಕಿರಿಯರನ್ನೆಲ್ಲಾ ಸೇರಿಸಿಕೊಂಡು ಲೋಕಸಭೆಗೆ ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ‌. ಇದರ ನಡುವೆ ತಮ್ಮ ಕಾರ್ಯಕರ್ತರಿಗೂ ಧೈರ್ಯ ತುಂಬಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *