ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆ ಕಳೆದ ಕೆಲವು ದಿನಗಳಿಂದ ಸ್ಥಗಿತಗೊಂಡಿತ್ತು. ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದ ಎಲ್ಲಾ ಶಾಲೆಗಳಿಗೂ ಮೊಟ್ಟೆ ನೀಡುವ ಯೋಜನೆಗೆ ಮತ್ತೆ ಅಸ್ತು ಎಂದಿದ್ದಾರೆ. ಇದಕ್ಕಾಗಿ 350 ಕೋಟಿ ಅಂದಾಜು ವೆಚ್ಚದ ಪಟ್ಟಿಗೆ ಕೂಡ ಒಪ್ಪಿಗೆ ನೀಡಲಾಗಿದೆ.
ಈ ಹಿಂದೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರ 1 ರಿಂದ 8 ನೇ ತರಗತಿಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ನೀಡಲಾಗುತ್ತಿತ್ತು. ಈ ಯೋಜನೆಯನ್ನು ರಾಜ್ಯದ ಎಲ್ಲಾ ಶಾಲೆಯ ಮಕ್ಕಳಿಗೂ ನೀಡುವಂತೆ ಶಿಕ್ಷಣ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಆ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡಲಾಗುತ್ತೆ ಎಂದು ಆದೇಶಿಸಲಾಗಿದೆ.
ಈ ಹಿಂದೆ 100 ದಿನಗಳ ಕಾಲ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ಆದರೆ ಇದೀಗ ಕೇವಲ 46 ದಿನಗಳು ಮಾತ್ರ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಎಂದಿನಂತೆ ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ವಿತರಣೆ ಮಾಡಲಾಗುತ್ತದೆ ಎಂದಿದ್ದಾರೆ.