ಬೆಂಗಳೂರು: ಒಕ್ಕೂಟ ಸರ್ಕಾರದ ಅಣತಿಯಂತೆ, ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ @BJP4Karnataka ದವರೆ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ. ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವ ನಿಮ್ಮ ‘ಬೆನ್ನು ಮೂಳೆ’ ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.
ಬಹು ಭಾಷೆಯ, ಬಹುಸಂಸ್ಕ್ರತಿಯ ದೇಶ ನಮ್ಮ ಭಾರತ. ಕೇವಲ ಒಂದು ಭಾಷೆಯನ್ನು ಮೆರೆಸುವ ಈ ಕೀಳು ಮಟ್ಟದ ರಾಜಕೀಯ ಏಕೆ? ಒಂದು ಭಾಷೆಯ ವೈಭವೀಕರಣದಿಂದಾಗಿ ಭಾರತದ ಅನ್ಯ ಭಾಷೆಗಳ ಶ್ರೀಮಂತಿಕೆಯನ್ನು ಗೌಣವಾಗಿಸುವ ಈ ಹುನ್ನಾರಕ್ಕೆ ಕನ್ನಡಿಗರ ಪ್ರಬಲ ವಿರೋಧ.
ನಮ್ಮ ದೇಶದ ಸಂವಿಧಾನದಲ್ಲಿ ರಾಷ್ಟ್ರಭಾಷೆಯೆಂಬ ಪರಿಕಲ್ಪನೆಯೇ ಇಲ್ಲ. ಹಾಗಿದ್ದಾಗ, ಯಾವಾಗಿಂದ ಹಿಂದಿ ರಾಷ್ಟ್ರಭಾಷೆಯಾಯ್ತು? ಅಂತರರಾಷ್ಟ್ರೀಯ ಮಟ್ಟದಲ್ಲಿ ಹಿಂದಿಯನ್ನು ಈ ಪರಿ ವಿಜೃಂಭಿಸುವ ನಿಮ್ಮ ರಾಜಕೀಯವನ್ನು ಸ್ವಾಭಿಮಾನಿ ಕನ್ನಡಿಗರು ಒಪ್ಪುವುದಿಲ್ಲ. ಇದಕ್ಕೆ ತಕ್ಕ ಪ್ರತಿಫಲ ಉಣ್ಣುತ್ತೀರಿ.
ಹಿಂದಿ ಭಾಷಿಕ ಪ್ರದೇಶಗಳು ಕನ್ನಡವೂ ಸೇರಿದಂತೆ ಭಾರತದ ಭಿನ್ನ ಭಾಷೆಗಳ ದಿವಸವನ್ನು ಆಚರಿಸುತ್ತವೆಯೇ? ಕೇವಲ ಒಂದು ಭಾಷೆಗೆ ಈ ಮಟ್ಟದ ಆದ್ಯತೆ ಏಕೆ? @BJP4India ತಾಳಕ್ಕೆ ಕುಣಿಯುವುದು ಬಿಟ್ಟು ಬೇರೇನೂ ಬಾರದ @BJP4Karnataka ದವರೆ, ನಿಮ್ಮ ಅಭಿಮಾನ ಶೂನ್ಯ ನಡೆಯು ತಲೆತಗ್ಗಿಸುವಂತದ್ದು.
ನನ್ನ ಕನ್ನಡಕ್ಕಿಂತ ಯಾರೂ ದೊಡ್ಡವರಲ್ಲ ಎಂದ ಕುವೆಂಪು ಅವರ ಕನ್ನಡಾಭಿಮಾನ ನಮ್ಮದೂ ಕೂಡ. ಭಾರತದ ಅಸಂಖ್ಯ ಶ್ರೀಮಂತ ಭಾಷೆಗಳಲ್ಲಿ ಹಿಂದಿಯೂ ಒಂದು. ಅದರ ಹೊರತಾಗಿ, ಹಿಂದಿ ಹೇರಿಕೆ, ವೈಭವೀಕರಣದ ಯಾವುದೇ ಕುತಂತ್ರದ ರಾಜಕೀಯಕ್ಕೆ ಧಿಕ್ಕಾರವೇ ಸೈ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…