Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಂಭಮೇಳ ಕಾಲ್ತುಳಿತದಲ್ಲಿ ಚಿತ್ರದುರ್ಗದ ವ್ಯಕ್ತಿ ಸಾವನ್ನಪ್ಪಿಲ್ಲ : ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸ್ಪಷ್ಟನೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.01 : ಪ್ರಯಾಗ್ ರಾಜ್ ನಲ್ಲಿ ಜರುಗುತ್ತಿರುವ ಕುಂಭಮೇಳದಲ್ಲಿ ಇತ್ತೀಚೆಗೆ ಜರುಗಿದ ಕಾಲ್ತುಳಿತದಲ್ಲಿ ಚಿತ್ರದುರ್ಗದ ಓರ್ವರು ಬಲಿಯಾಗಿದ್ದಾರೆ ಎಂಬುದಾಗಿ ಕೆಲ ಮಾಧ್ಯಮ ದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದು, ಆದರೆ ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಸ್ಪಷ್ಟಪಡಿಸಿದ್ದಾರೆ.

ವಾಸ್ತವವಾಗಿ ಆ ವ್ಯಕ್ತಿಯು ಪ್ರಯಾಗ್ ರಾಜ್ ನಿಂದ ಸುಮಾರು 500 km ದೂರದ ಲ್ಲಿರುವ ಝಾನ್ಸಿಯ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ಶವವಾಗಿ ಪತ್ತೆಯಾಗಿದ್ದು, ಈ ವಿಷಯವನ್ನು ಅಲ್ಲಿನ ರೈಲ್ವೆ ನಿಲ್ದಾಣದ ನೋಟಿಸ್ ಬೋರ್ಡ್ ನಲ್ಲಿ ಪ್ರಕಟಿಸಲಾಗಿರುತ್ತದೆ.

ಈ ಕುರಿತು ರೈಲ್ವೆ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಳ್ಳಲಾಗಿದೆ. ಹೀಗಾಗಿ ಝಾನ್ದಿ ರೈಲ್ವೆ ನಿಲ್ದಾಣ ದಲ್ಲಿ ಪತ್ತೆಯಾಗಿದ್ದ ಅಪರಿಚಿತ ಶವವನ್ನು ಇಲ್ಲಿನ ಆಸ್ಪತ್ರೆ ಯ ಶವಾಗಾರದಲ್ಲಿ ಇರಿಸಲಾಗಿದ್ದು, ಯಾರಾದರೂ ವಾರಸುದಾರರಿದ್ದಲ್ಲಿ, ಶವ ಗುರುತಿಸಿ, ಪತ್ತೆ ಮಾಡಿಕೊಳ್ಳಬಹುದಾಗಿದೆ.

Police Station GRP Jhansi Uttar Pradesh
Contact – 9454404423
8318896303

ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment