ತುಮಕೂರು: ಮಾಜಿ ಸಿಎಂ ಯಡಿಯೂರಪ್ಪ ಇಂದು ಅವರ ಪತ್ನಿ ಹೆಸರಿನ ಕಲ್ಯಾಣ ಮಂಟಪ ಉದ್ಘಾಟನೆ ಮಾಡಿದ್ದಾರೆ. ಇದೆ ವೇಳೆ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಿ, ಅವರು ಇರುವ ಕ್ಷೇತ್ರ ಬಿಟ್ಟು ಅದ್ಯಾಕೆ ಬೇರೆ ಕ್ಷೇತ್ರ ಹುಡುಕಾಟ ನಡೆಸುತ್ತಿದ್ದಾರೆ. ಆದ್ರೆ ಯಾಕೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ತಮ್ಮ ಕ್ಷೇತ್ರದಲ್ಲಿಯೇ ಕೆಲಸ ಮಾಡಿದ್ದರೆ ಈ ಸಮಸ್ಯೆ ಬರುತ್ತಾ ಇರಲಿಲ್ಲ ಎಂದಿದ್ದಾರೆ.
ಇದೆ ವೇಳೆ ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೇಗೌಡ ಅವರನ್ನು ಆಹ್ವಾನಿಸಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ನಂಗೆ ಗೊತ್ತಿರುವ ಪ್ರಕಾರ ಆಹ್ವಾನ ಪತ್ರಿಜೆಯೇನು ಹೊರಡಿಸಿರಲಿಲ್ಲ. ಬದಲಿಗೆ ಪತ್ರ ಬರೆದು, ಕರೆ ಮಾಡುವ ಮೂಲಕ ಆಹ್ವಾನ ನೀಡಲಾಗಿತ್ತು. ದೇವೇಗೌಡ ಅವರಿಗೂ ಅದೇ ರೀತಿ ಆಹ್ವಾನ ನೀಡಲಾಗಿತ್ತು. ಈ ವಿಚಾರವನ್ನು ಅನಗತ್ಯವಾಗಿ ಚರ್ಚೆ ಮಾಡಲಾಗುತ್ತಿದೆ. ದೇವೇಗೌಡ ಅವರು ಇದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ಹಿಂದೂ ಪದಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ಇದಕ್ಕೆ ನಾನೇನು ಉತ್ತರ ನೀಡಲ್ಲ. ಕಾಂಗ್ರೆಸ್ ನಲ್ಲಿರುವ 90% ನಾಯಕರು ಕೂಡ ನಾವೂ ಹಿಂದೂ ಎಂದೇ ಒಪ್ಪಿಕೊಳ್ಳುತ್ತಾರೆ. ಹಿಂದೂ ಎನ್ನುವಂತದ್ದು ದೊಡ್ಡ ಸಮೂಹ. ಅದನ್ನು ಒಪ್ಪಿಕೊಂಡು ಮುಂದಕ್ಕೆ ಸಾಗಬೇಕು ಎಂದಿದ್ದಾರೆ.
ಇನ್ನು ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಾರೆ. ನಾವೂ ಯಾರಿಗೂ ಟಿಕೆಟ್ ಕೊಡುತ್ತೀವಿ ಅಂತ ಭರವಸೆ ನೀಡಿಲ್ಲ. ಅದನ್ನೆಲ್ಲ ಪಕ್ಷ ತೀರ್ಮಾನ ಮಾಡುತ್ತೆ ಎಂದಿದ್ದಾರೆ.
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…