Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗಿಲ್ಲ ರಕ್ಷಣೆ: ಡಿ ಕೆ ಶಿವಕುಮಾರ್

Facebook
Twitter
Telegram
WhatsApp

ಹಾನಗಲ್: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉತ್ತರ ಪ್ರದೇಶ ಸೇರಿದಂತೆ ದೇಶದ ನಾನಾ ರಾಜ್ಯಗಳಲ್ಲಿ, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಭಾಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ನಾವು ನೋಡುತ್ತಲೇ ಇದ್ದೇವೆ. ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ನಾವು ಭೂಮಿಯನ್ನೂ ತಾಯಿಯಂತೆ ಕಾಣುತ್ತೇವೆ. ಜನಸಂಖ್ಯೆಯಲ್ಲಿ ಶೇ.50 ರಷ್ಟು ಇರುವ ಮಹಿಳೆಯರಿಗೆ ಈ ದೇಶ ಹಾಗೂ ರಾಜ್ಯದಲ್ಲಿ ಯಾವ ರೀತಿ ರಕ್ಷಣೆ ಸಿಗುತ್ತಿದೆ ಎಂದು ನಾವು ನೋಡುತ್ತಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ನಮ್ಮ ಮಹಿಳೆಯರಲ್ಲಿ ಮನವಿ ಮಾಡುತ್ತೇನೆ.

ಬಿಜೆಪಿ ಸರ್ಕಾರದಲ್ಲಿ ಮಹಿಳೆಯರಿಗೆ ಎಷ್ಟು ಸುರಕ್ಷತೆ ಇದೆ ಎಂಬುದನ್ನು ಬಿಜೆಪಿಯ ರಾಷ್ಟ್ರೀಯ ನಾಯಕಿಯೇ ಹೇಳಿದ್ದಾರೆ. ರಾಮ ಹುಟ್ಟಿದ ನಾಡಿನಲ್ಲಿ ಇಂತಹ ಪರಿಸ್ಥಿತಿ ಇದೆ ಎಂದರೆ, ಉಳಿದ ಕಡೆ ಮಹಿಳೆಯರ ರಕ್ಷಣೆ ಹೇಗಿರಬೇಡ? ಇದಕ್ಕೆ ಮಹಿಳೆಯರು ಬಿಜೆಪಿಗೆ ಮತ ಹಾಕಬೇಕಾ? ಈ ಬಗ್ಗೆ ಮುಖ್ಯಮಂತ್ರಿಗಳಿಂದ ಉತ್ತರ ನಿರೀಕ್ಷಿಸುತ್ತಿದ್ದೇನೆ. ದೇಶದ ಎಲ್ಲ ಮಹಿಳೆಯರು ಧ್ವನಿ ಎತ್ತಿ ಹೋರಾಡಬೇಕು. ಬಿಜೆಪಿ ವಿರುದ್ಧ ಮತ ಹಾಕಿ, ತಮ್ಮ ಸುರಕ್ಷತೆಯತ್ತ ಗಮನ ಹರಿಸಬೇಕು.

ಒದೇಶದಲ್ಲಿ 100 ಕೋಟಿ ಲಸಿಕೆ ನೀಡಲಾಗಿದೆ ಎಂದು ಬಿಜೆಪಿಯವರು ಸಂಭ್ರಮಿಸುತ್ತಿದ್ದಾರೆ. ಆದರೆ ಎರಡೂ ಡೋಸ್ ಲಸಿಕೆ ಕೊಟ್ಟಿರುವುದು ಶೇಕಡಾ 21 ರಷ್ಟು ಮಂದಿಗೆ ಮಾತ್ರ. ಕೋವಿಡ್ ನಿಂದ ಜನರನ್ನು ರಕ್ಷಿಸಿ ಉಳಿಸಿಕೊಂಡಿದ್ದರೆ ಸಂಭ್ರಮ ಪಡಬಹುದಿತ್ತು. ಈ ಸರ್ಕಾರ ಸತ್ತವರಿಗೆ ಪರಿಹಾರವನ್ನು ಕೊಡದಿರುವುದಕ್ಕೆ ಈ ಸಂಭ್ರಮಾಚರಣೆಯೇ?

ರೈತರ ಆದಾಯ ಡಬಲ್ ಮಾಡದಿರುವುದಕ್ಕೆ ಈ ಸಂಭ್ರಮವೇ? ರಾಜ್ಯದಲ್ಲಿ 4 ಲಕ್ಷ ಜನ ಸತ್ತಿದ್ದಕ್ಕೆ ಈ ಸಂಭ್ರಮವೇ? ಅವರಾರಿಗೂ ಪರಿಹಾರ ಕೊಡದಿರುವುದಕ್ಕೆ ಈ ಸಂಭ್ರಮವೇ?
ರಾಜ್ಯದಲ್ಲಿ ರೈತರು ಹೊರತಾಗಿ, 1.97 ಕೋಟಿ ಜನ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಸಾಂಪ್ರದಾಯಿಕ ವೃತ್ತಿ ಮಾಡುತ್ತಿರುವವರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇವರಲ್ಲಿ ಯಾರಿಗೂ ಸರಿಯಾಗಿ ಪರಿಹಾರ ಸಿಕ್ಕಿಲ್ಲ. ಅದಕ್ಕಾಗಿ ಈ ಸಂಭ್ರಮವೇ?

ರೈತರಿಗೆ ಬೆಂಬಲ ಬೆಲೆ, ಪರಿಹಾರ ನೀಡಿಲ್ಲ. ರೈತರ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿರುವುದಕ್ಕೆ ಈ ಸಂಭ್ರಮಾಚರಣೆಯೇ? ಗೊಬ್ಬರದ ಬೆಲೆ ಗಗನಕ್ಕೇರಿರುವುದಕ್ಕೆ ಈ ಸಂಭ್ರಮವೇ? ಬೆಲೆ ಇಳಿಸಿ ಸಂಭ್ರಮಿಸಿ. ನಿರುದ್ಯೋಗಿಗಳು, ಇದ್ದ ಉದ್ಯೋಗ ಕಳೆದುಕೊಂಡವರಿಗೆ ಪರಿಹಾರ ಕೊಡದಿರುವುದಕ್ಕೆ ಈ ಸಂಭ್ರಮವೇ? 20 ಲಕ್ಷ ಕೋಟಿ ಪ್ಯಾಕೇಜ್ ಯಾರಿಗೂ ತಲುಪದಿರುವುದಕ್ಕೆ ಸಂಭ್ರಮವೇ? ಎಂದು ಕಿಡಿಕಾರಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!