Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳ ಮೀಸಲಾತಿ ಜಾರಿಗೊಳಿಸದೇ ನೇಮಕಾತಿ ಬೇಡ : ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 26 : ಸುಪ್ರೀಂಕೋರ್ಟ್ ತೀರ್ಪಿನಂತೆ ಒಳ ಮೀಸಲಾತಿಯನ್ನು ಅನುಷ್ಟಾನಗೊಳಿಸದ ರಾಜ್ಯ ಸರ್ಕಾರದ ವಿರುದ್ದ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ವಿನೂತನವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಕೊರಳಿಗೆ ಚಿಕ್ಕ ಮಡಿಕೆ ಹಾಗೂ ಸೊಂಟಕ್ಕೆ ಗರಿಗಳನ್ನು ಸುತ್ತಿಕೊಂಡು ಮುಖಕ್ಕೆ ಬಣ್ಣ ಬಳಿದುಕೊಂಡು ಪ್ರವಾಸಿ ಮಂದಿರದಿಂದ ತಮಟೆ ಬಾರಿಸುತ್ತ ಆಗಮಿಸಿದ ಪ್ರತಿಭಟನಾಕಾರರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

 

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾದಿಗ ಮುಖಂಡ ಹನುಮಂತಪ್ಪ ದುರ್ಗಾ 35 ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದರು ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳು ಮಾದಿಗರನ್ನು ಕಡೆಗಣಿಸುತ್ತಲೆ ಬರುತ್ತಿವೆ. ಬಹುಸಂಖ್ಯೆಯಲ್ಲಿರುವ ಮಾದಿಗ ಸಮುದಾಯ ಹಿಂದಿನಿಂದಲೂ ಅನ್ಯಾಯ, ಶೋಷಣೆ ಅನುಭವಿಸಿಕೊಂಡು ಬರುತ್ತಿದೆ. ಇನ್ನು ಸಹಿಸಿಕೊಂಡಿರುವುದಿಲ್ಲ. ಎಲ್ಲಾ ಕಟ್ಟುಪಾಡುಗಳನ್ನು ಬಿಟ್ಟು ಹೊರಗೆ ಬಂದು ಚುನಾಯಿತ ಪ್ರತಿನಿಧಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ. ಮಾದಿಗರ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿರುವುದನ್ನು ಕಾಂಗ್ರೆಸ್ ಮರೆತಂತಿದೆ. ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಿ ನಮ್ಮ ಶಕ್ತಿ ಏನೆಂಬುದನ್ನು ತೋರಿಸುತ್ತೇವೆಂದು ಎಚ್ಚರಿಸಿದರು.

 

ದಲಿತ ಮುಖಂಡ ಬಿ.ರಾಜಣ್ಣ ಮಾತನಾಡಿ ನಮ್ಮ ಜನಾಂಗದ ಮತ ಪಡೆದು ಅಧಿಕಾರಕ್ಕೇರಿರುವ ಕಾಂಗ್ರೆಸ್‍ಗೆ ಒಳ ಮೀಸಲಾತಿ ನೀಡಲು ಏನು ಕಷ್ಟ. ಶಿಕ್ಷಣ, ಉದ್ಯೋಗ ಹಾಸ್ಟೆಲ್ ಸೌಲಭ್ಯಗಳಿಗಾಗಿ ಕಳೆದ 30 ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಮಾದಿಗರ ಅಹವಾಲು ಆಲಿಸುತ್ತಿಲ್ಲ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಕೆಲವು ಮುಖಂಡರುಗಳು ಜನಾಂಗದ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಹೋರಾಟ ಮಾಡದ ಬ್ರಾಹ್ಮಣರಿಗೆ
ಪ್ರಧಾನಿ ಮೋದಿರವರು ಶೇ.10 ರಷ್ಟು ಮೀಸಲಾತಿ ನೀಡಿದರು. ಹೆಚ್.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಪ್ರಿಯಾಂಕ ಖರ್ಗೆ ಇವರುಗಳೆ ಅಧಿಕಾರಕ್ಕೆ ಅಂಟಿಕೊಂಡರೆ  ಮಾದಿಗರು ಎಲ್ಲಿಗೆ ಹೋಗಬೇಕೆಂದು ಪ್ರಶ್ನಿಸಿದರು?

 

ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾದಾ ಸಾಹೇಬ್ ಎನ್.ಮೂರ್ತಿ ಸ್ಥಾಪಿತ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ ಮಾತನಾಡುತ್ತ ಒಳ ಮೀಸಲಾತಿ ಜಾರಿಗೊಳಿಸದೆ 56,432 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಬಾರದು. ನೇಮಕಾತಿಗೆ ಹೊರಡಿಸಿರುವ ಸುತ್ತೋಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದಕ್ಕೆ ಪಡೆಯಬೇಕು. ಅಲೆಮಾರಿ ಮತ್ತು ಅರೆಅಲೆಮಾರಿಗಳಿಗೆ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಯನ್ನು ಕೊಡಬೇಕೆಂದು ಒತ್ತಾಯಿಸಿದರು.

 

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಲಕ್ಷ್ಮಣ, ತಿಪ್ಪೇಸ್ವಾಮಿ, ನಗರಂಗೆರೆ ದೇವರಾಜ್, ಹೆಗ್ಗೆರೆ ಶಂಕರ್, ಹರೀಶ್ ಜೈಭೀಮ್, ಕೆ.ರಾಜಪ್ಪ, ತಾಳಿಕೆರೆ ಮಂಜುನಾಥ್, ಪ್ರಕಾಶ್, ರಘು ಇಂಗಳದಾಳ್, ಎಂ.ದೇವರಾಜ್, ಮಲ್ಲಿಕಾರ್ಜುನ, ವೆಂಕಟೇಶ್, ಸೋಮಣ್ಣ, ಶಿವಣ್ಣ ಜೆ.ಜೆ.ಹಟ್ಟಿ, ಪಿ.ಸುರೇಶ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now