ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸರ್ ನೇಮ್ ತೆಗೆದುಕೊಂಡು ಮಾತನಾಡಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಇದರಿಂದ ಜೈಲು ಶಿಕ್ಷೆ ಹಾಗೂ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು. ಈ ಸಂಬಂಧ ರಾಹುಲ್ ಗಾಂಧಿ ಜೈಲು ಶಿಕ್ಷೆಗೆ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
ಸೂರತ್ ಸೆಷನ್ಸ್ ಕೋರ್ಟ್ ನಲ್ಲಿ ಈ ಅರ್ಜಿ ವಿಚಾರಣೆ ನಡೆಯುತ್ತಿತ್ತು. ಹೆಚ್ಚುವರಿ ನ್ಯಾಯಾಧೀಶ ಆರ್ಪಿ ಮೊಗೇರಾ, ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ್ದರು. ತೀರ್ಪನ್ನು ಇವತ್ತಿಗೆ ಕಾದಿರಿಸಿ, ತೀರ್ಪು ನೀಡಿದ್ದಾರೆ. ಅವರು ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ್ದಾರೆ.
ಮೋದಿ ಸರ್ ನೇಮ್ ಇರುವವರೆಲ್ಲಾ ಕಳ್ಳರೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಈ ವಿಚಾರ ಸಂಬಂಧ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದಲ್ಲದೆ, 10 ಸಾವಿರ ದಂಡ ಹಾಗೂ ಎರಡು ವರ್ಷ ಜೈಲು ಶಿಕ್ಷೆಗೆ ಗುರಿ ಮಾಡಿತ್ತು.