ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ಸಂಘರ್ಷ ಕೋರ್ಟ್ ಮೆಟ್ಟಿಲೇರಿದೆ. ಮುಂದಿನ ಆದೇಶದ ತನಕ ಯಾರು ಧಾರ್ಮಿಕ ವಸ್ತ್ರ ಧರಿಸಿ ಕಾಲೇಜಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಕಾಲೇಜಿಗೆ ಹಿಜಾಬ್ ಧರಿಸಿ ಹೋಗಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಅರ್ಜಿದಾರರು ಮತ್ತು ಸರ್ಕಾರಿ ವಕೀಲರ ವಾದ ಆಲಿಸಿದ ತ್ರಿ ಸದಸ್ಯ ಪೀಠ, ಪ್ರಕರಣವನ್ನು ಸೋಮವಾರಕ್ಕೆ ಮುಂದೂಡಿದೆ.
ಮುಂದಿನ ಆದೇಶ ಬರುವ ತನಕ ಶಾಲಾ ಕಾಲೇಜಿಗೆ ಹಿಜಾಬ್ ಆಗಲಿ, ಶಾಲನ್ನಾಗಲಿ ಧರಿಸಿ ಹೋಗುವಂತಿಲ್ಲ. ಕಾಲೇಜು ನಡೆಯಲೇಬೇಕಿದೆ. ಹೀಗಾಗಿ ಮಧ್ಯಂತರ ಆದೇಶ ನೀಡಲಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.