ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆ.30 : ಪದಕ ವಿಜೇತ ಕ್ರೀಡಾಪಟುಗಳಿಗೆ ನೀಡುವ ಗೌರವ ಧನಕ್ಕೆ ಮೀಸಲಾತಿ ಬೇಡ. ಎಲ್ಲಾ ಕ್ರೀಡಾಪಟುಗಳಿಗೆ ಸಮಾನವಾಗಿ ನೀಡಬೇಕೆಂದು ಅಂತರಾಷ್ಟ್ರೀಯ ಕ್ರೀಡಾಪಟು ಹಾಗೂ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್ ಹೇಳಿದರು.
ಹಾಕಿ ಮಾಂತ್ರಿಕ ಧ್ಯಾನ್ಚಂದ್ ಹುಟ್ಟುಹಬ್ಬವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸುತ್ತಿರುವುದರಿಂದ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಗೆ ಜಾತಿ ಸೋಂಕು ಇರಬಾರದು. ಎಲ್ಲಾ ಜಾತಿ ಧರ್ಮದವರನ್ನು ಬೆಸೆಯುವ ಶಕ್ತಿ ಕ್ರೀಡೆಗಿದೆ. ಆದುದರಿಂದ ಪದಕ ವಿಜೇತ ಕ್ರೀಡಾಪಟುಗಳಿಗೆ ನೀಡುವ ಗೌರವ ಧನಕ್ಕೆ ಮೀಸಲಾತಿ ಅಗತ್ಯವಿಲ್ಲ. ಧ್ಯಾನ್ಚಂದ್ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಕೊಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.
ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಸುಚೇತ ನೇಲವಗಿ, ಅಂತರಾಷ್ಟ್ರೀಯ ಕ್ರೀಡಾಪಟು ನಾಗಭೂಷಣ್, ತರಬೇತುದಾರರಾದ ಮುಹಿಬುಲ್ಲಾ, ಅಕ್ರಮ್ ನಾಗ್ತೆ, ಸಾಧಿಕ್, ಅಪ್ಪು, ನಿವೃತ್ತ ದೈಹಿಕ ಶಿಕ್ಷಕ ಜಯಣ್ಣ ಇನ್ನು ಮೊದಲಾದವರು ಈ ಸಂದರ್ಭದಲ್ಲಿದ್ದರು.
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…