Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈಚಘಟ್ಟದಲ್ಲಿ ಸೋಲಾರ್ ಪ್ಲಾಂಟ್ ಬೇಡ, ಗೋಮಾಳ ಉಳಿಸಿ : ಗ್ರಾಮಸ್ಥರ ಆಕ್ರೋಶ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 16 : ಹೊಳಲ್ಕೆರೆ ತಾಲ್ಲೂಕು ಈಚಘಟ್ಟ ಗ್ರಾಮದಲ್ಲಿ ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸುತ್ತಿರುವುದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಕರಿಯಪ್ಪ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಈಚಘಟ್ಟ ಗ್ರಾಮದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರೆ ಜಾಸ್ತಿಯಾಗಿದ್ದು, ಜಾನುವಾರುಗಳ ಮೇವಿಗಾಗಿ ಉಳಿಸಿಕೊಂಡಿರುವ ಗೋಮಾಳದಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸುವುದು ಬೇಡ. ಪ್ರಭಾವಿಗಳು ಪೊಲೀಸರ ಮೂಲಕ ನಮಗೆ ಬೆದರಿಕೆ ಹಾಕಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಗೋಮಾಳ ಜಮೀನನ್ನು ಬಿಟ್ಟುಕೊಡುವುದಿಲ್ಲ. ಜಿಲ್ಲಾಧಿಕಾರಿ ಒಮ್ಮೆ ಈಚಘಟ್ಟ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ವೀಕ್ಷಿಸಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ನಿರಂತರವಾಗಿರುತ್ತದೆಂದು ಎಚ್ಚರಿಸಿದರು.

ನ್ಯಾಯವಾದಿ ಈಚಘಟ್ಟದ ಅಶ್ವಿನಿ ಮಾತನಾಡಿ ಹಿಂದಿನಿಂದಲೂ ಗೋಮಾಳ ಜಮೀನನ್ನು ಜಾನುವಾರುಗಳ ಮೇವಿಗಾಗಿ ಉಳಿಸಿಕೊಂಡು ಬರಲಾಗಿದೆ. ಈಗ ಏಕಾಏಕಿ ಅಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ಮುಂದಾಗಿರುವುದಕ್ಕೆ ನಾವುಗಳು ಅವಕಾಶ ಕೊಡುವುದಿಲ್ಲ. ಎಸ್ಸಿ, ಎಸ್ಟಿ.ಗಳೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮದಲ್ಲಿ ಜಾನುವಾರುಗಳೆ ಜೀವನಕ್ಕೆ ಆಧಾರವಾಗಿದೆ. ಗೋಮಾಳ ಜಮೀನು ರಕ್ಷಣೆಯೆ ನಮ್ಮ ಗುರಿ. ಈ ಹಿಂದೆ ಅನೇಕ ಬಾರಿ ಜಿಲ್ಲಾಡಳಿತದ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಪಾದಿಸಿದರು.

ಈಚಘಟ್ಟದ ಕೆ.ಜಯಣ್ಣ, ತಿಪ್ಪೇಸ್ವಾಮಿ, ಟಿ.ಗೀತಾ, ಸಿ.ಬಿ.ಭಾಗ್ಯ, ಪದ್ಮ, ಎಂ.ಗಂಗಮ್ಮ, ರತ್ನಮ್ಮ, ಜಯಮ್ಮ, ಮಹಾರುದ್ರಪ್ಪ, ಮಲ್ಲೇಶಪ್ಪ, ತಿಪ್ಪೇಶಿ, ವೀರೇಶ, ಭದ್ರಪ್ಪ
ನ್ಯಾಯವಾದಿ ಓ.ಪ್ರತಾಪ್‍ಜೋಗಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now