ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 01 : ಸತ್ಯ ಮತ್ತು ಅಹಿಂಸೆಯನ್ನು ಅಸ್ತ್ರವನ್ನಾಗಿಸಿಕೊಂಡು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ದ ಹೋರಾಡಿದ ರಾಷ್ಟ್ರಪಿತ ಮಹಾತ್ಮಗಾಂಧಿಜಿಯವರ ಪ್ರತಿಮೆ ಐತಿಹಾಸಿಕ ಚಿತ್ರದುರ್ಗದಲ್ಲಿ ಎಲ್ಲಿಯೂ ಇಲ್ಲದಿರುವುದು ನೋವಿನ ಸಂಗತಿ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ.ಎಂ.ಇಮಾಮ್ ಬೇಸರ ವ್ಯಕ್ತಪಡಿಸಿದ್ದಾರೆ.
ಹೆಸರಿಗಷ್ಟೆ ಗಾಂಧಿ ಸರ್ಕಲ್ ಎಂದು ನಾಮಕರಣ ಮಾಡಲಾಗಿದೆ. ಆದರೆ ಅಲ್ಲಿ ಗಾಂಧಿಜಿ ಪುತ್ಥಳಿಯೇ ಇಲ್ಲ. ಪ್ರತಿವರ್ಷ ಅ.2 ರಂದು ಗಾಂಧಿ ಜಯಂತಿ ಆಚರಿಸಿ ಗಾಂಧಿಯನ್ನು ನೆನಪು ಮಾಡಿಕೊಂಡರೆ ಸಾಲದು. ಜಿಲ್ಲಾಡಳಿತ, ನಗರಸಭೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ನಗರದ ಮುಖ್ಯ ವೃತ್ತದಲ್ಲಿ ಗಾಂಧಿ ಪ್ರತಿಮೆಯನ್ನು ಸ್ಥಾಪಿಸಿದಾಗ ಮಾತ್ರ ನಿಜವಾಗಿಯೂ ರಾಷ್ಟ್ರಪಿತನಿಗೆ ಬಹುದೊಡ್ಡ ಗೌರವ ಸಲ್ಲಿಸಿದಂತಾಗುತ್ತದೆಂದು ಎ.ಎಂ.ಇಮಾಮ್ ಮನವಿ ಮಾಡಿದ್ದಾರೆ.