ದಾವಣಗೆರೆ: ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯಾಗಿದ್ದು, ಶಾಸಕ ಎಂ ಪಿ ರೇಣುಕಾಚಾರ್ಯ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನೆಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.
ನಮ್ಮ ಸರ್ಕಾರ ಶ್ರೀ ಯೋಗಿ ಆದಿತ್ಯನಾಥ್ ಜಿ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ. ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ?.
ಪ್ರತಿ ಬಾರಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಿಂದ ಏನೂ ಪ್ರಯೋಜನವಿಲ್ಲ. ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳ ಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು.
ಕೆಲ ದಿನಗಳ ಹಿಂದೆ ನನಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನೂ ಸಹ ನಮ್ಮ ಪೊಲೀಸ್ ಇಲಾಖೆ ಇದುವರೆಗೂ ಪತ್ತೆ ಹಚ್ಚಿಲ್ಲ ಎಂದು ಹೇಳಿಕೊಳ್ಳುವುದಕ್ಕೆ ನನಗೆ ಮುಜುಗರವಾಗುತ್ತದೆ. ಜನರಿಗೆ ಬೇಕಾಗಿರುವುದು ನಮ್ಮ ಪೌರುಷದ ಭಾಷಣ ಅಥವಾ ಹೇಳಿಕೆಗಳಲ್ಲ, ನಾವು ತೆಗೆದುಕೊಳ್ಳುವ ನಿರ್ಧಾಕ್ಷಣ್ಯ ಕ್ರಮಗಳು.
ಹಿಂದೂ ಸಮೂಹ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳಲು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರೆಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಮತ್ತೊಮ್ಮೆ ಹೇಳುತ್ತೇನೆ ಎಂದು ಸಾಲು ಸಾಲು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…