ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಮತ್ತೆ ನೀರು ಬಿಡಬಾರದು : ಚಿತ್ರದುರ್ಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ,(ಸೆ.15) : ರಾಜ್ಯ ಸರ್ಕಾರ ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೆ ಕುಡಿಯುವ ನೀರೂ ಇಲ್ಲದ ಹಾಹಾಕಾರ ಉಂಟಾಗಲಿದೆ. ಅದರಿಂದ ಆಗುವ ಅನಾಹುತಗಳನ್ನು ಊಹಿಸಲೂ ಸಾಧ್ಯವಿಲ್ಲ, ರಾಜ್ಯದ ಎಲ್ಲ ಸಂಸದರೂ ದೆಹಲಿಯಲ್ಲಿ ಧರಣಿ ನಡೆಸಬೇಕು. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು, ರಾಜೀನಾಮ ನೀಡಲೂ ಸಿದ್ಧವಾಗಿರಬೇಕು. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಪ್ರಾಧಿಕಾರದ ಆದೇಶವನ್ನು ಪಾಲಿಸಬಾರದು, ತಮಿಳುನಾಡಿಗೆ ಮತ್ತೆ ನೀರು ಬಿಡಕೂಡದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸುತ್ತದೆ.

ನಗರದ ಸಂತೇಪೇಟೆಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ ಕರವೇ ಕಾರ್ಯಕರ್ತರು ದಾರಿಯುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಸಂಸದರ ರಾಜೀನಾಮೆಗೆ ಆಗ್ರಹಿಸಿದರು.

ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಎಂದೂ ಕಾಣದ ಬರಗಾಲದ ನಿರ್ಮಾಣವಾಗಿದೆ. ವಾಡಿಕೆಯಂತೆ ಮಳೆ ಆಗಿಲ್ಲ, ಈಗಾಗಲೇ 14 ತಾಲೂಕುಗಳ ಪ್ರತಿ 102 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ. ವಿಶೇಷವಾಗಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಕೃಷ್ಣರಾಜಸಾಗರ ಜಲಾಶಯದಲ್ಲಿ, ಉಳಿದಿರುವುದು ಕೇವಲ 20 ಟಿಎಂಸಿ ನೀರು, ಅದರಲ್ಲಿ ಬಳಕೆಗೆ ಸಿಗುವುದು ಕೇವಲ 15 ಟಿಎಂಸಿ ನೀರು ಮಾತ್ರ ಇಂಥ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣೆ ಪ್ರಾಧಿಕಾರ ಸುಮಾರು 7 ಟಿಎಂಸಿಯಷ್ಟು ನೀರು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಶ್ಚರ್ಯಕರವಾಗಿದೆ, ಆಘಾತಕಾರಿಯಾಗಿದೆ.

ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು. ನಾಡಿನ ಜನರ ಜೀವಗಳಿಗಿಂತ ಯಾವುದೋ ಪ್ರಾಧಿಕಾರದ ಆದೇಶ ದೊಡ್ಡದಾಗಲು ಹೇಗೆ ಸಾಧ್ಯ? ಈ ಪ್ರಾಧಿಕಾರದ ಆದೇಶ ಪಾಲಿಸಲು ಹೋಗಿ ಅವರು ಕೇಳಿದಷ್ಟು ನೀರನ್ನು ಇದುವರೆಗೆ ಬಿಟ್ಟಿದ್ದೇ ರಾಜ್ಯ ಸರ್ಕಾರದ ದೊಡ್ಡ, ತಪ್ಪು ಈಗಲೂ ಸರ್ಕಾರ ಸ್ಪಷ್ಟ ಧೋರಣೆಯನ್ನು ಪ್ರಕಟಿಸಿದಂತೆ ಕಾಣುತ್ತಿಲ್ಲ, ಈಗಲಾದರೂ ರಾಜ್ಯ ಸರ್ಕಾರ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾಡುವುದನ್ನು ಬಿಟ್ಟು ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂಬ ದೃಢ ಘೋಷಣೆಯನ್ನು ಮಾಡಬೇಕು ಎಂದು ಒತ್ತಾಯಿಸಿ ಒಂದೂಮ್ಮೆ ಸರ್ಕಾರ ಅಂಥ ದುಸ್ಸಾಹಸಕ್ಕೆ ಕೈಹಾಕಿದರೆ ರಾಜ್ಯದ ಜನರು ನಿರ್ಮಾಣವಾಗುತ್ತದೆ. ಕರ್ನಾಟಕ ರಕ್ಷಣಾ ವೇದಿಕೆ, ಚಿತ್ರದುರ್ಗ ಜಿಲ್ಲಾ ಘಟಕದಿಂದ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.

ಈ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷರಾದ ಟಿ ರಮೇಶ್ ವಹಿಸಿದ್ದರು, ಈ ಪ್ರತಿಭಟನೆಯಲ್ಲಿ. ರಾಜಪ್ಪ, ಜಿ ಚಿತ್ರದುರ್ಗ ತಾಲೂಕು ಅಧ್ಯಕ್ಷರು ಚಿತ್ರಮರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಲ್.ಎಂ.ವಿಜಯಕುಮಾರ್, ಪಿ ರಮೇಶ್ ನಗರ ಅಧ್ಯಕ್ಷರು ಚಿತ್ರದುರ್ಗ, ಎಸ್, ಬಿ.ಗಣೇಶ್, ಜಿಲ್ಲಾ ಪ್ರಧಾನ ಸಂಚಾಲಕರು ಜಿಲ್ಲಾ ಉಪಾಧ್ಯಕ್ಷರುಗಳಾದ ಟಿ .ಕ ಶಿವಮೂರ್ತಿ ಬಿ ವೆಂಕಟೇಶ್, ಆರ್. ಜಿ. ಲಕ್ಷಣ, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಎಂಕೆ ಹಟ್ಟಿ ರಮೇಶ್.ವಸಂತ, ಮಲ್ಲ ಪುಸಾದ್: ಬಾಬು ಹಳಿಯೂರ್, ಚಿತ್ರದುರ್ಗ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಚಂದ್ರಕಲಾ, ಸಿ ಅಶ್ವಥ್ ಚಳ್ಳಕೆರ ತಾಲೂಕು ಅಧ್ಯಕ್ಷರಾದ ವೆಂಕಟೇಶ್ ಸ್ವಪ್ನ ಹಿರಿಯೂರು ತಾಲೂಕು ಅಧ್ಯಕ್ಷರಾದ ರಾಮಕೃಷ್ಣಪ್ಪ, ಗೌರವ ಅಧ್ಯಕ್ಷರಾದ ಗೋ ಬಸವರಾಜು, ತಾಲೂಕು ಕಾರ್ಯದರ್ಶಿಯಾದ ದಾದಾಪೀರ್, ನಗರ ಅಧ್ಯಕ್ಷರಾದ ಜಾಕೀರ್ ವಿದ್ಯಾರ್ಥಿ ಘಟಕದ ಅಧ್ಯಕ್ಷರಾದ ಮನು ತಾಲೂಕು ಪ್ರಧಾನ ಕಾರ್ಯದರ್ಶಿ ಯಾದ ನೀಲಕಂಠ ಚಿತ್ರದುರ್ಗ ತಾಲ್ಲೂಕು ಮಹಿಳಾ ಜಿಲ್ಲಾ ಮಹಿಳಾ ಸಂಘಟನಾ ಕಾರ್ಯದರ್ಶಿ ಮಂಜುಳಾ, ಸುಮಾ, ಜ್ಯೋತಿ ಹಾಗೂ ಕರವೇ ಕಾರ್ಯಕರ್ತರು ಎಂ . ಹಟ್ಟಿ ಮಾರುತಿ, ರುದ್ರೇಶ್, ಕಾರ್ತಿಕ್, ರವಿ. ಜಯಪ್ಪ, ರವೀಶ್, ಸಂದೀಪ, ಲೋಕೇಶ್, ಉಮೇಶ್ ಹಾಗೂ ಲಕ್ಷ್ಮಣ ಭಾಗವಹಿಸಿದ್ದರು.

suddionenews

Recent Posts

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

  ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…

1 hour ago

ಯಾವ ವಯಸ್ಸಿನಿಂದ ಮಕ್ಕಳಿಗೆ ಚಹಾ ಅಥವಾ ಕಾಫಿಯನ್ನು ನೀಡಬಹುದು ? ಚಿಕ್ಕ ವಯಸ್ಸಿನಲ್ಲಿ ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…

4 hours ago

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…

4 hours ago

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

14 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

14 hours ago

ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಬಿಸಿಯೂಟ ಸವಿದ ಜಿ.ಪಂ ಸಿಇಒ

ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

14 hours ago