ಧಾರವಾಡ: ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಅಂತ ಜಾರಿ ಮಾಡಲಾಗಿದೆ. ಇದೀಗ ವೀಕೆಂಡ್ ಕರ್ಫ್ಯೂ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅದರ ಅಗತ್ಯವೇ ಇಲ್ಲ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಅಗತ್ಯವಿಲ್ಲ. ಜನತೆಗೆ ಈಗಾಗಲೇ ಲಸಿಕೆ ನೀಡಲಾಗಿದೆ. ಹೀಗಾಗಿ ನೋಡಿಕೊಂಡು ಕ್ರಮ ತೆಗೆದುಕೊಳ್ಳಬೇಕಾಗಿದೆ. ಸಿಎಂ ಬೊಮ್ಮಾಯಿ ಅವರಿಗೆ ಈ ಬಗ್ಗೆ ಸಲಹೆ ನೀಡುತ್ತೇನೆ ಎಂದಿದ್ದಾರೆ.
ಈಗಾಗಲೇ ವೀಕೆಂಡ್ ಕರ್ಫ್ಯೂ ಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ವ್ಯಾಪಾರಿಗಳು, ಹೊಟೇಲ್ ಮಾಲೀಕರೆಲ್ಲ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಹೀಗೆ ಮುಂದಿವರೆದರೆ ನಮ್ಮ ಜೀವನ ಕಷ್ಟಕರವಾಗುತ್ತೆ. 50-50 ಬೇಕಾದರೂ ಇರಲಿ, ಆದ್ರೆ ವೀಕೆಂಡ್ ಕರ್ಫ್ಯೂ ಬೇಡ ಎಂದಿದ್ದಾರೆ. ಹೀಗಾಗಿ ಸರ್ಕಾರವು ಈ ಬಗ್ಗೆ ಶುಕ್ರವಾರದ ನಂತರ ಸಡಿಲಿಕೆ ಮಾಡಲಾಗುತ್ತೆ ಎಂಬ ಭರವಸೆ ನೀಡಿದ್ದಾರೆ.