ಮದುವೆಯಾದ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ಮಲಾಲಾ ಯರೂಸುಫ್‌ಜಾಯ್

ಬ್ರಿಟನ್ : ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ಹೆಣ್ಣುಮಕ್ಕಳ ಶಿಕ್ಷಣದ ಪ್ರಚಾರಕ ಮತ್ತು ಹೆಣ್ಣುಮಕ್ಕಳ ಶಿಕ್ಷಣದ ಹೋರಾಟಗಾರ್ತಿ ಮಲಾಲಾ ಯೂಸುಫ್‌ಜಾಯ್ ವಿವಾಹವಾಗಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ತನ್ನ ಮದುವೆಯನ್ನು ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ತಮ್ಮ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆಯಿತು ಎಂದು ಇನ್ಸ್ಟಾಗ್ರಾಮ್ ನಲ್ಲಿ ಬಹಿರಂಗಪಡಿಸಿದ್ದಾರೆ.

ಗಂಡನ ಹೆಸರು ಅಸ್ಸಾರ್ ಎಂದೂ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಅವರು ತಮ್ಮ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ‘ನಾವು ಮದುವೆಯಾಗಿದ್ದೇವೆ’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಿದ್ದಾರೆ.

ಮಲಾಲಾ ಈ ಹಿಂದೆ ಬ್ರಿಟನ್ ನಿಯತಕಾಲಿಕೆಗೆ ನೀಡಿದ ಸಂದರ್ಶನದಲ್ಲಿ “ಜನರು ಏಕೆ ಮದುವೆಯಾಗಬೇಕು ಎಂದು ನನಗೆ ಇನ್ನೂ ಅರ್ಥವಾಗುತ್ತಿಲ್ಲ. ನಿಮ್ಮ ಜೀವನದಲ್ಲಿ ನೀವು ಪುರುಷನನ್ನು ಮದುವೆಯಾಗಲು ಬಯಸಿದರೆ, ನೀವು ಮದುವೆ ಪತ್ರಗಳಿಗೆ ಏಕೆ ಸಹಿ ಹಾಕಬೇಕು” ಎಂದು ಹೇಳಿದ್ದು, ಗಮನಾರ್ಹವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *