ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
![](https://suddione.com/content/uploads/2024/10/gifmaker_me-5-1.gif)
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 : ಕಾರ್ಯಕರ್ತರು ಸಂಘಟಿತರಾದಾಗ ಮಾತ್ರ ಸರ್ಕಾರ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಸಣ್ಣ ನೀರಾವರಿ, ವಿಜ್ಞಾನ, ತಂತ್ರಜ್ಞಾನ ಸಚಿವ ಬೋಸರಾಜು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮಂಗಳವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯಕರ್ತರು ಸದಸ್ಯರುಗಳಾಗುವ ಅವಕಾಶವಿದೆ. ಎಲ್ಲರೂ ಶಾಸಕರು, ಸಚಿವರಾಗುವುದು ಕಷ್ಟ. ಭಿನ್ನಾಭಿಪ್ರಾಯಗಳನ್ನು ಬಿಟ್ಟು ಒಗ್ಗಟ್ಟಾಗಿದ್ದರೆ ಪಕ್ಷಕ್ಕೆ ಅನುಕೂಲವಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಆಯಾ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಏನಾದರೂ ಸಮಸ್ಯೆಗಳಿದ್ದರೆ ನಾಯಕರುಗಳ ಗಮನಕ್ಕೆ ತನ್ನಿ. ಇಲಾಖೆಯ ಕೆಲಸಗಳೇನಾದರೂ ಇದ್ದಲ್ಲಿ ಪ್ರಾಮಾಣಿಕವಾಗಿ ಮಾಡಲು ಸಿದ್ದನಿದ್ದೇನೆಂದು ಹೇಳಿದರು.
ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಬ್ರಾಹ್ಮಣರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯಸಿಂಹ ಮಾತನಾಡಿ ಸರ್ವ ಧರ್ಮವನ್ನು ಗೌರವಿಸುವ ಪಕ್ಷ ಕಾಂಗ್ರೆಸ್‍ನಿಂದ ಮಾತ್ರ ಎಲ್ಲಾ ಜಾತಿ ಧರ್ಮದವರಿಗೂ ಸಾಮಾಜಿಕ ನ್ಯಾಯ ನೀಡಲು ಸಾಧ್ಯ. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ಉಚಿತ ಗ್ಯಾರೆಂಟಿಗಳನ್ನು ಬಡವರಿಗೆ ನೀಡಿದ್ದಾರೆ. ಕೋಮುವಾದಿ ಬಿಜೆಪಿಯವರ ಅಪ ಪ್ರಚಾರಕ್ಕೆ ಯಾರು ಕಿವಿಗೊಡುವುದು ಬೇಡ ಎಂದು ಕಾರ್ಯಕರ್ತರನ್ನು ಎಚ್ಚರಿಸಿದರು.
![](https://suddione.com/content/uploads/2025/01/studio-11.webp)
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ದಿ ಸಮಿತಿಗೆ ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೆ ಆದ್ಯತೆ ನೀಡಿ ನೇಮಕ ಮಾಡುವಂತೆ ಸಚಿವ ಬೋಸರಾಜುರವರಲ್ಲಿ ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಉಪಾಧ್ಯಕ್ಷರುಗಳಾದ ಎಸ್.ಎನ್.ರವಿಕುಮಾರ್, ನಜ್ಮತಾಜ್, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತ ನಂದಿನಿಗೌಡ
ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವಿಭಾಗದ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ಮೊಹಿದ್ದೀನ್, ಕಾರ್ಯದರ್ಶಿ ಪರ್ವಿನ್, ನಗರಸಭೆ ಸದಸ್ಯ ನರಸಿಂಹಮೂರ್ತಿ, ಇಂದಿರಾ, ಸೇವಾದಳದ ಜಿಲ್ಲಾಧ್ಯಕ್ಷ ಭೂತೇಶ್, ಸೈಯದ್ ವಲಿಖಾದ್ರಿ, ಮುದಸಿರ್‍ನವಾಜ್, ಪ್ರಕಾಶ್‍ರಾಮನಾಯ್ಕ, ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.
![](https://suddione.com/content/uploads/2025/02/site.webp)